ಶಿವಮೊಗ್ಗ ಗೋಪಿ ಸರ್ಕಲ್‌ನಿಂದ ವಿದ್ಯಾರ್ಥಿಗಳ ಮೆರವಣಿಗೆ, ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 SEPTEMBER 2023
SHIMOGA : ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿಧ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು (Scholarship)ತಕ್ಷಣವೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ (ABVP) ಶುಕ್ರವಾರ ನಗರದ ಗೋಪಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
2022-23ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸರಕಾರದ ವಿವಿಧ ಇಲಾಖೆಗಳ ಅಡಿ ಲಭ್ಯವಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೂ ಅರ್ಜಿ ಸಲ್ಲಿಸಲಾಗಿದೆ‌. ಹಲವು ತಿಂಗಳು ಕಳೆದರೂ ಈವರೆಗೆ ವಿದ್ಯಾರ್ಥಿ ವೇತನ (Scholarship) ಬಿಡುಗಡೆಯಾಗಿಲ್ಲ ಎಂದು ಎಬಿವಿಪಿ (ABVP) ಕಾರ್ಯಕರ್ತರು ಆರೋಪಿಸಿದರು‌.
ಈ ಬಾರಿಯ ಪದವಿ ಪರೀಕ್ಷೆಗಳು ಈಗಾಗಲೆ ನಡೆಯುತ್ತಿವೆ. ಮುಂದಿನ ತರಗತಿಗಳಿಗೂ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ. ಆದರೂ ರಾಜ್ಯ ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಹಲವು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈ ಕೂಡಲೆ ಗಮನ ಹರಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರವೀಣ್, ಶರಣ್, ಅಭಿಷೇಕ್, ಯಶಸ್ವಿನಿ, ಸಿಂಚನಾ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2023

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

Leave a Comment