SHIMOGA | ಅತ್ಯಾಚಾರಿಗಳ ಮರಣದಂಡನೆಗೆ ಆಗ್ರಹ, ವೈದ್ಯೆಯ ರೇಪ್, ಮರ್ಡರ್’ಗೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 03 ಡಿಸೆಂಬರ್ 2019

ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಸಜೀವವಾಗಿ ದಹಿಸಿದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಫಾಸ್ಟ್ ಟ್ರ್ಯಾಕ್ ಕೋರ್ಟುಗಳಲ್ಲಿ ಅತ್ಯಾಚಾರಿಗಳ ವಿಚಾರಣೆ ನಡೆಸಿ ಮರಣದಂಡನೆ ವಿಧಿಸಬೇಕು. ಆಗ ಇಂತಹ ಘಟನೆಗಳು ನಡೆಯದಂತೆ ತಡೆಯಲು ಸಾದ್ಯ ಎಂದರು.

ತೆಲಂಗಾಣದ ಗೃಹ ಸಚಿವರು ವೈದ್ಯ ವಿರುದ್ಧವೇ ಪ್ರಶ್ನೆ ಮೂಡುವಂತೆ ಹೇಳಿಕೆ ನೀಡಿದ್ದಾರೆ. ಇದು ಅವರ ಕೀಳು ಮಾನಸಿಕತೆಯನ್ನು ಬಿಂಬಿಸುತ್ತದೆ ಎಂದರು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ನಗರ ಕಾರ್ಯದರ್ಶಿ ಎಲ್.ಜಿ.ಅರವಿಂದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

Students Protest with ABVP in Shimoga against the rapists. Protesters urged the rapists to be hanged immediately. They even Criticized the Telangana Home Minister over his reaction on Dr.Priyanka Reddy rape and murder case.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment