ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಸರ್ಕಾರ ತಕ್ಷಣ ಬಂಡವಾಳ ಹೂಡಿಕೆ ಮಾಡಿ, ಉತ್ಪಾದನೆ ಆರಂಭಿಸಬೇಕು ಅಂತಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಯಲ್ಲಿ ಇರುವುದು ಶೋಚನೀಯ. ಹಾಗಾಗಿ ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಕಾರ್ಖಾನೆ ಪುನಶ್ಚೇತನದ ಕುರಿತು ಧ್ವನಿ ಎತ್ತಬೇಕು ಎಂದರು.
ತೀವ್ರ ನಿಗಾ ಘಟಕದಲ್ಲಿ ಹಾಸ್ಟೆಲ್
ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶೇ.50ರಷ್ಟು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಉಳಿದಿವೆ. ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯವಿಲ್ಲದೆ ಐಸಿಯುನಲ್ಲಿವೆ. ಕೂಡಲೆ ಮೂಲ ಸೌಕರ್ಯಕ್ಕೆ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ನಿರ್ಣಯಿಸಲಾಯಿತು.

ಮಹಾತ್ಮ ಗಾಂಧೀಜಿ ಅವರ 150ನೆ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಾಜ್ಯದ 150 ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು. ಹೊಸ ಶಿಕ್ಷಣ ನೀತಿ ಕರುಡು ತಯಾರಿಸಿದ ಡಾ.ಕಸ್ತೂರಿ ರಂಗನ್ ಮತ್ತು ಪ್ರೊ.ಎಂ.ಕೆ.ಶ್ರೀಧರ್ ಅವರಿಗೆ ಕಾರ್ಯಕಾರಿಣಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಎಬಿವಿಪಿ ಕಾರ್ಯದರ್ಶಿ ಹರ್ಷ ನಾರಾಯಣ ತಿಳಿಸಿದರು.
ಜಿಲ್ಲಾ ಸಂಚಾಲಕ ಎಲ್.ಎನ್.ಮಂಜುನಾಥ್, ಹಿರಿಯ ಕಾರ್ಯಕರ್ತ ಶಿವಕುಮಾರ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200