ಶಿವಮೊಗ್ಗದ ಎರಡು ಮನೆ, ಚನ್ನಗಿರಿಯ ತೋಟ ಸೇರಿದಂತೆ ರಾಜ್ಯಾದ್ಯಂತ 60 ಕಡೆ ಎಸಿಬಿ ದಾಳಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರಾಜ್ಯಾದ್ಯಂತ 60ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಎರಡು ಮನೆಗಳ ಮೇಲೂ ದಾಳಿಯಾಗಿರುವ ಮಾಹಿತಿ ಲಭ್ಯವಾಗಿದೆ.

ADVT JULY NANJAPPA HOSPITAL HOME LAB TESTING

ಚಾಲುಕ್ಯ ನಗರ ಮತ್ತು ಗೋಪಾಳ ಬಡಾವಣೆಯಲ್ಲಿನ ಇರುವ ಎರಡು ಮನೆಗಳ ಮೇಲೆ ಎಸಿಬಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.

ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಎಸಿಬಿ ಅಧಿಕಾರಿಗಳು ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚನ್ನಗಿರಿಯ ತೋಟ, ಗದಗದಲ್ಲಿ ಬಾಡಿಗೆ ಮನೆಯಲ್ಲೂ ಪರಿಶೀಲನೆ ನಡೆಯುತ್ತಿದೆ.

8 ಎಸ್.ಪಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು, 300ಕ್ಕೂ ಹೆಚ್ಚು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿರುವುದಾಗಿ ಎಸಿಬಿ ತಿಳಿಸಿದೆ.

shivamogga live subscribe band

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment