ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿರುವ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರ ಎರಡು ಮನೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸುತ್ತಿದ್ದ ಶೋಧ ಕಾರ್ಯ ಪೂರ್ಣಗೊಂಡಿದೆ. ಈತನಕ ಪತ್ತೆಯಾಗಿರುವ ಚಿನ್ನಾಭರಣ, ವಾಹನಗಳು, ಆಸ್ತಿ ಮತ್ತು ನಗದು ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

ಟಿ.ಎಸ್.ರುದ್ರೇಶಪ್ಪಗೆ ಸೇರಿದ 2 ಮನೆಗಳು, ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನಗಳು ಪತ್ತೆಯಾಗಿವೆ.
ಶೋಧ ಕಾರ್ಯದ ವೇಳೆ 9 ಕೆ.ಜಿ. 400 ಗ್ರಾಂ ತೂಕದ ಚಿನ್ನದ ಬಿಸ್ಕೇಟ್ ಹಾಗೂ ಆಭರಣ, ಮೂರು ಕೆ.ಜಿ ತೂಕದ ಬೆಳ್ಳಿ ವಸ್ತುಗಳು ಸಿಕ್ಕಿವೆ.
ಎರಡು ಕಾರುಗಳು, ಮೂರು ದ್ವಿಚಕ್ರ ವಾಹನಗಳು ಕೂಡ ಪತ್ತೆಯಾಗಿವೆ.
ಇನ್ನು, ಎಂಟು ಎಕರೆ ಕೃಷಿ ಭೂಮಿಯ ದಾಖಲೆಗಳು ಕೂಡ ಶೋಧ ಕಾರ್ಯದ ವೇಳೆ ಸಿಕ್ಕಿದೆ.
ಮನೆಗಳಲ್ಲಿ 15.94 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಇನ್ನು, ಮನೆಯಲ್ಲಿ ಸುಮಾರು 20 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.
ತನಿಖೆ ಮುಂದುವರೆದಿದ್ದು, ವಿಚಾರಣೆ ಮುಂದುವರೆದಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






