ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯವಾಗಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಬಸ್ ತಡೆದು ಪ್ರತಿಭಟಿಸಿದರು.
ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ ಎ ಹುದಾ ಬಳಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ರಕ್ತದ ಮಡುವಿನಲ್ಲಿದ್ದ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳೀಯರ ಆಕ್ರೋಶ
ಅಪಘಾತಕ್ಕೀಡಾದ ವ್ಯಕ್ತಿಯ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು. ಅಲ್ಲದೆ ಬೈಪಾಸ್ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ವೇಗ ತಗ್ಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರನ್ನು ಸಮಾಧಾನಪಡಿಸಿದರು.
ಪಶ್ಚಿಮ ಸಂಚಾರ ಠಾಣೆ ವ್ಯಪ್ತಿಯಲ್ಲಿ ಘಟನೆ ಸಂಭವಿಸಿದೆ.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






