ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | ACCIDENT | 21 ಮೇ 2022
ಎಗ್ ರೈಸ್ ಸೇವಿಸಿ ಮನೆ ಕಡೆಗೆ ನಡೆದು ಹೋಗುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಬೈಕ್ ಸವಾರನೊಬ್ಬ ಹಿಂಬದಿಯಿಂದ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯ ಕೈ, ಕಾಲುಗಳುಗೆ ಗಾಯವಾಗಿದೆ.
ಕೆ.ಎಸ್.ಆರ್.ಪಿ ಸಿಬ್ಬಂದಿ ಇಮಾನುಲ್ಲಾ ಹುಸೇನ್ (23) ಅವರು ಗಾಯಗೊಂಡಿದ್ದಾರೆ. ಕೆ.ಎಸ್.ಆರ್.ಪಿ ಕ್ವಾರ್ಟರ್ಸ್’ನಿಂದ ಮಾಚೇನಹಳ್ಳಿ ಬಳಿಗೆ ಬಂದು ರಾತ್ರಿ ಎಗ್ ರೈಸ್ ಸೇವಿಸಿ, ಮನೆ ಹಿಂತಿರುಗುತ್ತಿದ್ದರು.
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಸಂದರ್ಭ ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇಮಾನುಲ್ಲಾ ಹುಸೇನ್ ಗಾಯಗೊಂಡಿದ್ದಾರೆ. ಆದರೆ ಸವಾರ ಬೈಕ್ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಮಹಿಳಾ ಪಾಲಿಟೆಕ್ನಿಕ್’ನಲ್ಲಿ ಡಿಪ್ಲೋಮಾ ಕೋರ್ಸ್’ಗಳಿಗೆ ಪ್ರವೇಶ ಆರಂಭ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.






