ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020
ಶಿವಮೊಗ್ಗದ ಹೊಳೆ ಬಸ್ ನಿಲ್ದಾಣದ ಬಳಿ ತುಂಗಾ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಇಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತುಂಗಾ ನದಿ ಹೊಸ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಗೂಡ್ಸ್ ಆಟೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಆಟೋ ಚಾಲಕ ಮತ್ತು ಬೈಕ್ ಸವಾರ ಇಬ್ಬರಿಗೂ ಗಾಯವಾಗಿದೆ.
ಟೂ ವೇ ಗೊಂದಲ
ಬಿ.ಹೆಚ್.ರಸ್ತೆಯಲ್ಲಿ ತುಂಗಾ ನದಿಗೆ ಅಡ್ಡಲಾಗಿ ಎರಡು ಸೇತುವೆಗಳಿವೆ. ಎರಡು ಸೇತುವೆ ಮೇಲೆ ಒನ್ ವೇ ಸಂಚಾರವಿತ್ತು. ಕಳೆದ ವರ್ಷದ ಮಳೆಗಾಲದ ಬಳಿಕ ಹಳೆ ಸೇತುವೆ ಮೇಲೆ ಲಾರಿ, ಬಸ್ಸು ಸೇರಿದಂತೆ ಭಾರಿ ವಾಹನ ಸಂಚಾರಕ್ಕೆ ನಿರ್ಬಂಧವಿದೆ. ಹಾಗಾಗಿ ಹೊಸ ಸೇತುವೆ ಮೇಲೆ ದ್ವಿಮುಖ ವಾಹನ ಸಂಚಾರವಿದೆ. ಆದರೆ ವಾಹನ ಸವಾವರರು ಗೊಂದಲಕ್ಕೀಡಾಗಿ ಅಪಘಾತ ಸಂಭವಿಸುತ್ತಿವೆ. ಕೆಲ ತಿಂಗಳ ಹಿಂದೆ ಇದೇ ಗೊಂದಲದಿಂದಾಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿದ್ದರು.
ಇವತ್ತು ಅಪಘಾತಕ್ಕೆ ಇದೆ ಗೊಂದಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೂರ್ವ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
PHOTO | Suresh
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]