ಹೊಟೇಲ್, ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿದ ಎಡಿಸಿ, ತಂಬಾಕು ಉತ್ಪನ್ನ ಮಾರಾಟಗಾರರಿಗೆ ವಾರ್ನಿಂಗ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA | 7 ಫೆಬ್ರವರಿ 2020

2019 readers copy new

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಉತ್ಪನ್ನ ಖರೀದಿಸುವಂತೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪೇರೇಪಿಸುವುದನ್ನು ನಿಯಂತ್ರಿಸಿ, ಅಂಥವರ ವಿರುದ್ಧ ತಂಬಾಕು ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಖುದ್ದು ಅಂಗಡಿ ಮುಂಗಟ್ಟು, ಹೋಟೆಲ್ ಸೇರಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದರು.

84334527 1047217002306386 6246424702420516864 n.jpg? nc cat=104& nc ohc=1Qd89PqnKDMAX8t0OVy& nc ht=scontent.fblr1 4

ಸಂದರ್ಭದಲ್ಲಿ ಮಾತನಾಡಿದ ಅವರು, ಅಪ್ರಾಪ್ತರಿಗೆ ಹಾಗೂ ಅಪ್ರಾಪ್ತರಿಂದ ತಂಬಾಕು ಉತ್ಪನ್ನಗಳ ಮಾರಾಟ, ಶಾಲಾ ಕಾಲೇಜುಗಳ 300 ಅಡಿ ಪ್ರದೇಶದ ಮಿತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಕ್ಯಾನ್ಸರ್ಕರಾಳತೆಯನ್ನು ಪ್ರತಿಬಿಂಬಿಸುವ ಚಿತ್ರವಿಲ್ಲದ ತಂಬಾಕು ಉತ್ಪನ್ನಗಳ ಪ್ಯಾಕೆಟ್ ಮಾರಾಟ ಮಾಡುವುದು ಅಪರಾಧ ಎಂದರು.

ನಿರಂತರವಾಗಿ ಮಾಹಿತಿ ಮತ್ತು ಸೂಚನೆ ನೀಡುತ್ತಿದ್ದರೂ ತಂಬಾಕು ಉತ್ಪನ್ನಗಳ ಮಾರಾಟ ಸ್ಥಗಿತಗೊಂಡಿಲ್ಲ. ನಿಟ್ಟಿನಲ್ಲಿ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು ಅಧಿಕಾರಿಗಳ ತಂಡ ಕಾಲಕಾಲಕ್ಕೆ ದಿಢೀರ್ ದಾಳಿ ನಡೆಸಿ ದಂಡನೆಗೆ ಗುರಿಪಡಿಸಲಿದೆ ಎಂದು ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಜಿಲ್ಲಾದ್ಯಂತ ಈಗಾಗಲೆ ಕಾರ್ಯಾಚರಣೆ ನಡೆಸಿ ದಂಡ ವಿಧಿಸುವ ಮೂಲಕ ಸಾರ್ವಜನಿಕರಲ್ಲಿ ಹಾಗೂ ವರ್ತಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಜಿಲ್ಲಾ ಕೇಂದ್ರಸ್ಥಾನ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಈಗಾಗಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಮರ್ಪಕವಾಗಿ ಕಾಯ್ದೆ ಅನುಷ್ಠಾನಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸುವುದು ನಮ್ಮ ಗುರಿ ಎಂದರು.

83974138 1047217088973044 2156978493546561536 n.jpg? nc cat=102& nc ohc=qoDBJZbJmpYAX 9UNMQ& nc ht=scontent.fblr1 3

ಮುಂದಿನ ದಿನಗಳಲ್ಲಿ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ತಂಬಾಕು ಮಾರಾಟಗಾರರು,ಟೀ ಮಾರಾಟಗಾರರು ಕೋಟ್ಟಾ ಕಾಯ್ದೆ ಉಲ್ಲಂಘಿಸದಂತೆ ಎಚ್ಚರಿಕೆಯಿಂದಿರಲು ಸೂಚಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment