ಶಿವಮೊಗ್ಗದಲ್ಲಿ ಅಡ್ಡಪಲ್ಲಕ್ಕಿ ಉತ್ಸವ, ಫ್ರೀಡಂ ಪಾರ್ಕ್‌ನಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಭೂಮಿ ಪೂಜೆ

ಶಿವಮೊಗ್ಗ: ನಗರದಲ್ಲಿ ಮೂವತ್ತೆರಡು ವರ್ಷಗಳ ನಂತರ ಮೇ 17ರಂದು ನಡೆಯಲಿರುವ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಜಾಗೃತಿ ಸಭೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭದ ಆಯೋಜಿಸಲಾಗಿದೆ.

ಮಹೋತ್ಸವದ ನಿಮಿತ್ತ ಅಲ್ಲಮಪ್ರಭು ಮೈದಾನದಲ್ಲಿ ನಿರ್ಮಿಸುವ ಸಭಾಮಂಟಪ, ಮುಖ್ಯ ವೇದಿಕೆ, ದಾಸೋಹ ಭವನ ಸೇರಿ ಭಕ್ತರಿಗೆ ಅಗತ್ಯವಿರುವ ವಿವಿಧ ಮೂಲ ಸೌಕರ್ಯಗಳ ನಿರ್ಮಾಣ ಕಾರ್ಯಕ್ಕೆ ಭದ್ರಾವತಿ ಬಿಳಕಿ ಶ್ರೀ ರಾಚೋಟೇಶ್ವರ ಸ್ವಾಮೀಜಿ, ಮಳಲಿ ಮಠದ ಶ್ರೀ ಡಾ. ನಾಗಭೂಷಣ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಾಲನೆ ದೊರಕಿತು.

Adda-Pallaki-Utsava-Bhoomi-Pooje-at-Freedom-Park-in-Shimoga.

ಮಹೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಸಮಿತಿ ಈಗಾಗಲೇ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದ್ದು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ ಇರುವುದರಿಂದ ಮೂಲ ಸೌಕರ್ಯ, ದಾಸೋಹ ವ್ಯವಸ್ಥೆ, ವಾಹನ ನಿಲುಗಡೆ, ಕುಡಿಯುವ ನೀರು ಹಾಗೂ ಭಕ್ತರ ಸೌಲಭ್ಯಗಳಿಗೆ ವಿಶೇಷ ಆದ್ಯತೆ ಬಗ್ಗೆ ಸಮಿತಿ ಪದಾಧಿಕಾರಿಗಳು ಚರ್ಚಿಸಿದರು.

ಮಾಜಿ ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪ್ರಮುಖರಾದ ಎಸ್. ಎಸ್.ಜ್ಯೋತಿಪ್ರಕಾಶ್, ಸಂತೋಷ್ ಬಳ್ಳೆಕೆರೆ, ಎಸ್.ಪಿ.ದಿನೇಶ್, ಅನಿತಾ ರವಿಶಂಕರ್, ಮಂಗಳಾ ನಾಗೇಂದ್ರ ಮತ್ತಿತರರಿದ್ದರು.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion