ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 APRIL 2023
SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಗೆ ಈಗಾಗಲೇ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಯೋಧರು ಆಗಮಿಸಿದ್ದಾರೆ. ಇವತ್ತು ರಾತ್ರಿ ಮತ್ತಷ್ಟು ಯೋಧರು ಜಿಲ್ಲೆಗೆ ಬರಲಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.
ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಸಿಎಪಿಎಫ್‍ನಲ್ಲಿ (CAPF) ಗಡಿ ಭದ್ರತಾ ಪಡೆ, ಕೇಂದ್ರ ಮೀಸಲು ಪಡೆ ಸೇರಿದಂತೆ ವಿವಿಧ ಪಡೆಗಳು ಇರಲಿದೆ.
ಚುನಾವಣೆ ಹಿನ್ನೆಲೆ ಸಿಎಪಿಎಫ್‍ನ 6 ತುಕಡಿ ಜಿಲ್ಲೆಗೆ ಆಗಮಿಸಿದೆ. ಶಿವಮೊಗ್ಗ ಗ್ರಾಮಾಂತರ ಹೊರತು ಉಳಿದೆಲ್ಲ ಕಡೆಗೆ ಈ ಯೋಧರನ್ನು ನಿಯೋಜಿಸಲಾಗಿದೆ. ಇವತ್ತು ರಾತ್ರಿ ಇನ್ನೂ 8 ತುಕಡಿ ಆಗಮಿಸಲಿದೆ. ಇವರನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ನಿಯೋಜನೆ ಮಾಡಲಾಗುತ್ತದೆ. ಈಗಾಗಲೆ ಕ್ಷೇತ್ರವಾರು ಸ್ಟ್ರಾಂಗ್ ರೂಂಗಳನ್ನು ಸ್ಥಾಪಿಸಲಾಗಿದೆ. ಮತಯಂತ್ರಗಳನ್ನು ಕ್ಷೇತ್ರಗಳಿಗೆ ಕಳುಹಿಸಲಾಗಿದೆ. ಸ್ಟ್ರಾಂಗ್ ರೂಂಗಳ ಭದ್ರತೆಗೂ ಸಿಎಪಿಎಫ್ ಯೋಧರನ್ನು ನಿಯೋಜಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು.
ಇದನ್ನೂ ಓದಿ – ಅಮೆರಿಕಾದಿಂದ ಬಂದ ಫೇಸ್‌ಬುಕ್ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ಶಿವಮೊಗ್ಗದ ಯುವಕನಿಗೆ ಕಾದಿತ್ತು ಶಾಕ್
ಜಿಲ್ಲೆಯಾದ್ಯಂತ 36 ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಅಂತರ್ ಜಿಲ್ಲಾ ಗಡಿಗಳಲ್ಲಿನ ಚೆಕ್ ಪೋಸ್ಟ್‍ಗಳಲ್ಲಿ ನಿರಂತರ ತಪಾಸಣೆ ನಡೆಯುತ್ತಿದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422