ಚಂದ್ರು ಕೇಸ್, ವಿನಯ್ ಗುರೂಜಿಯ ವಿಚಾರಣೆ ಸಂಬಂಧ ಶಿವಮೊಗ್ಗದಲ್ಲಿ ಎಡಿಜಿಪಿ ಏನಂದರು?

SHIVAMOGGA LIVE NEWS | 4 NOVEMBER 2022

SHIMOGA | ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮುಂದಿನ ತನಿಖೆಗೆ ಅನುಕೂಲವಾಗಲಿದೆ. ಪ್ರಕರಣದಲ್ಲಿ ಅಗತ್ಯ ಬಿದ್ದರೆ ಮಾತ್ರ ಅವಧೂತ ವಿನಯ್ ಗುರೂಜಿ ಅವರನ್ನು ಪ್ರಶ್ನಿಸುತ್ತೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. (questioning vinay guruji)

Shimoga Nanjappa Hospital

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಚಂದ್ರಶೇಖರ್ ನಾಪತ್ತೆ ಮತ್ತು ಸಾವಿನ ಪ್ರಕರಣ ಸಂಬಂಧ ಕಿರಣ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತರೀಕೆರೆ, ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಸರ್ಕಲ್, ನ್ಯಾಮತಿ ಸರ್ಕಲ್ ನ ಸಿಸಿಟಿವಿಗಳಲ್ಲಿ ಕಾರು ಪತ್ತೆಯಾಗಿದೆ. ಅದರ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು.

(questioning vinay guruji)

ಮರಣೋತ್ತರ ಪರೀಕ್ಷಾ ವರದಿ ಬರಲಿ

ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ಬಳಿಕ ಚಂದ್ರಶೇಖರ್ ಸಾವಿನ ಕುರಿತು ಸ್ಪಷ್ಟತೆ ಸಿಗಲಿದೆ. ಚಂದ್ರಶೇಖರ್ ಅವರಿಗೆ ಬೆದರಿಕೆ ಇರುವ ಕುರಿತು ಈತನಕ ಯಾವುದೆ  ಮಾಹಿತಿ ಇಲ್ಲ ಎಂದು ತಿಳಿಸಿದರು.

(questioning vinay guruji)

ಅಗತ್ಯ ಬಿದ್ದರಷ್ಟೆ ಗುರೂಜಿ ವಿಚಾರಣೆ

ಇನ್ನು, ಅವಧೂತ ವಿನಯ್ ಗುರೂಜಿ ಅವರ ವಿಚಾರಣೆ ನಡೆಸಲಾಗುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಿದ ಬಳಿಕ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟತೆ ಸಿಗಲಿದೆ. ಚಂದ್ರಶೇಖರ್ ನಾಪತ್ತೆಯಾದ ಬಳಿಕ ಪೊಲೀಸ್ ಸಿಬ್ಬಂದಿ ವಿನಯ ಗುರೂಜಿ ಅವರಿಂದ ಮಾಹಿತಿ ಪಡೆದಿದ್ದಾರೆ. ಮುಂದೆ ಅಗತ್ಯ ಬಿದ್ದರಷ್ಟೆ ಅವರನ್ನು ಪ್ರಶ್ನಿಸುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಕುರಿತು ಶಿವಮೊಗ್ಗದಲ್ಲಿ ಯಡಿಯೂರಪ್ಪ ಹೇಳಿಕೆ

Shimoga Nanjappa Hospital

 

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment