ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಬರ್ತಿದ್ದಾರೆ ಕೇಂದ್ರ ಸಚಿವ, ಸಂಸದ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 16 JANUARY 2025

ಶಿವಮೊಗ್ಗ : ಸಾಗರ ಪ್ರಾಂತ್ಯ ಅಡಿಕೆ (Adike) ಬೆಳೆಗಾರರ ಸಂಘದ ವತಿಯಿಂದ ಜ.18ರಂದು ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿದೇಶಿ ಅಡಿಕೆ ಆಮದು, ಅಡಿಕೆಗೆ ಬಾಧಿಸುತ್ತಿರುವ ರೋಗಗಳು, ವನ್ಯಜೀವಿ ಹಾವಳಿ, ಅಡಿಕೆ ಬೆಳೆಗಾರರಿಗೆ ಇರುವ ಸೊಪ್ಪಿನ ಬೆಟ್ಟದ ಸಮಸ್ಯೆಗಳಿಗೆ ಪರಿಹಾರವನ್ನು ಪ್ರಮುಖವಾಗಿರಿಸಿಕೊಂಡು ಸಮಾವೇಶ ನಡೆಸಲಾಗುತ್ತಿದೆ ಎಂದರು.  

toyota-exchange-mela-

ರಾಜ್ಯದ ಅಡಿಕೆ ವಿದೇಶಕ್ಕೆ ರಫ್ತಿಗೆ ಮನವಿ

160125 BY Ragahvendra and Haratalu halappa press meet

ಅಡಿಕೆ ಕುರಿತು ಸಂಶೋಧನೆ ನಡೆಸಿ ಕ್ಯಾನ್ಸರ್‌ಕಾರಕ ಅಂಶಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಬೇಕು. ಈ ಸಂಶೋಧನೆಗೆ ಪ್ರತ್ಯೇಕವಾಗಿ ಹಣ ಮೀಸಲಿಡಬೇಕು. ಎಲೆ ಚುಕ್ಕೆ ರೋಗದಿಂದ ಈಗಾಗಲೆ ಸುಮಾರು 226 ಕೋಟಿ ರೂ. ನಷ್ಟವಾಗಿದೆ. ಆದ್ದರಿಂದ ರೋಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ರಾಜ್ಯದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಬೇಕು. ರಾಜ್ಯದ ಅಡಿಕೆಯನ್ನು ವಿದೇಶಕ್ಕೆ ರಫ್ತು ಮಾಡಬೇಕು. ವಿದೇಶಿ ಆಡಿಕೆ ಆಮದು ತಗ್ಗಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಮನವಿ ಮಾಡಲಾಗುತ್ತದೆ ಎಂದು ರಾಘವೇಂದ್ರ ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.

Abhishek-padavidhara-sahakara-sanga

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಲೆನಾಡು Start Up ಸಮ್ಮೇಳನ, ಉದ್ಘಾಟನೆಗೆ ಬರ್ತಿದ್ದಾರೆ ಕೇಂದ್ರ ಸಚಿವ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment