ಶಿವಮೊಗ್ಗದಲ್ಲಿ ಕೆಂಪು ಪಟ್ಟಿ ಧರಿಸಿ ವಕೀಲರ ಪ್ರತಿಭಟನೆ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಶಿವಮೊಗ್ಗ : ರಾಜ್ಯ ವಕೀಲರ (Advocates) ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತೋಳಿಗೆ ಕೆಂಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಕೀಲರು, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು?

ಏ.16ರಂದು ಪ್ರಕರಣವೊಂದರ ಚರ್ಚೆಗೆ ವಕೀಲ (Advocates) ಸದಾಶಿವರೆಡ್ಡಿ ಅವರ ಕಚೇರಿಗೆ ಬಂದಿದ್ದ ಇಬ್ಬರು, ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಘಟನೆ ಖಂಡಿಸಿ ಇವತ್ತು ರಾಜ್ಯಾದ್ಯಂತ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತೆಯೇ ಶಿವಮೊಗ್ಗದಲ್ಲಿಯು ಪ್ರತಿಭಟನೆ ನಡೆಯುತ್ತಿದೆ. ಸಾಂಕೇತಿಕವಾಗಿ ಕೆಂಪು ಪಟ್ಟಿ ಧರಿಸಿ ಪ್ರತಿರೋಧ ವ್ಯಕ್ತಪಡಿಸಲಾಗುತ್ತಿದೆ.

– ಜಿ.ಆರ್.ರಾಘವೇಂದ್ರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ

Bar-Association-Protest-in-Shimoga

Bar-Association-Protest-in-Shimoga - Advocates

Bar-Association-Protest-in-Shimoga - Advocates

Leave a Comment