ಶಿವಮೊಗ್ಗದಲ್ಲಿ ಬೀದಿಗಿಳಿದ ವಕೀಲರು, ಒಂದೂವರೆ ಗಂಟೆ ರಸ್ತೆ ತಡೆ, ಆಕ್ರೋಶಕ್ಕೆ ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 1 DECEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ವಕೀಲರ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ರಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಒಂದೂವರೆ ಗಂಟೆ ರಸ್ತೆ ತಡೆ

ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರು ಇವತ್ತು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಆವರಣದಿಂದ ಗೋಪಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ವಕೀಲರು ಆಗ್ರಹಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

ಪೊಲೀಸರ ಜೊತೆ ಮಾತಿಗೆ ಮಾತು

ಇನ್ನು, ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ವಕೀಲರ ಮನವಿ ಆಲಿಸಿದರು. ಆದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಬೇಕು ಎಂದು ವಕೀಲರು ಪಟ್ಟು ಹಿಡಿದರು. ಈ ವೇಳೆ ವಕೀಲರು ಮತ್ತು ಪೊಲೀಸರ ಜೊತೆ ಮಾತಿಗೆ ಮಾತಾಯಿತು.

Advocates Protest In Shimoga

ಗೂಂಡಾಗಳಂತೆ ವರ್ತನೆ, ಅಮಾನುಷ ಹಲ್ಲೆ

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿರಿಯ ವಕೀಲ ಕೆ.ಪಿ.ಶ್ರೀಪಾಲ್, ಇದು ಇಡೀ ಪೊಲೀಸ್ ಇಲಾಖೆ ವಿರುದ್ಧದ ಹೋರಾಟವಲ್ಲ. ಪೊಲೀಸ್ ಇಲಾಖೆಯಲ್ಲಿ ಗೂಂಡಾ ವರ್ತನೆ ಮಾಡುವವರು ಮತ್ತು ಭ್ರಷ್ಟರ ವಿರುದ್ಧದ ಹೋರಾಟ. ಯುವ ವಕೀಲನ ಮೇಲೆ ಗೂಂಡಾಗಳಂತೆ ಹಲ್ಲೆ ನಡೆಸಲಾಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

advocate protest in Shimoga

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಜಾಮ್

ಗೋಪಿ ಸರ್ಕಲ್‌ನಲ್ಲಿ ವಕೀಲರು ಬಹು ಹೊತ್ತು ಪ್ರತಿಭಟನೆ ನಡೆಸಿದ್ದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ಆದರೆ ಕಿರಿದಾದ ರಸ್ತೆಗಳಿಂದಾಗಿ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

advocate protest in Shimoga

advocate protest in Shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment