ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ದುಬೈನಿಂದ ಬಂದಿದ್ದ ವ್ಯಕ್ತಿಗೆ ದಕ್ಷಿಣ ಆಫ್ರಿಕಾದ ರೂಪಾಂತರಿ ಕರೋನ ವೈರಸ್ ತಗುಲಿದೆ ಎಂಬ ವಿಚಾರ ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಮೂಡಿಸಿತ್ತು. ಅದರೆ ಲ್ಯಾಬ್ ರಿಪೋರ್ಟ್‍ನಲ್ಲಿ ನೆಗೆಟಿವ್ ಬಂದ ಹಿನ್ನೆಲೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಜನರು ಆತಂಕದಿಂದ ದೂರಾಗಿದ್ದಾರೆ.
ಪ್ರಾಥಮಿಕ, ದ್ವಿತೀಯ ಸಂಪರ್ಕದವರು ಸೇಫ್
ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರ ವರದಿಯು ನೆಗೆಟಿವ್ ಬಂದಿದೆ. ಒಂಭತ್ತು ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದರು. 30 ಮಂದಿ ದ್ವಿತೀಯ ಸಂಪರ್ಕದಲ್ಲಿದ್ದರು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ ಸುರಗೀಹಳ್ಳಿ ತಿಳಿಸಿದ್ದಾರೆ.
18 ದಿನದ ಬಳಿಕ ಆಫ್ರಿಕಾ ವೈರಸ್..!
ಶಿವಮೊಗ್ಗ ಜೆ.ಪಿ.ನಗರದ ನಿವಾಸಿಯೊಬ್ಬರು ಫೆಬ್ರವರಿ 21ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ಇವರನ್ನು ಕರೋನ ತಪಾಸಣೆಗೆ ಒಳಪಡಿಸಲಾಗಿತ್ತು.
ಬೆಂಗಳೂರಿನಿಂದ ಅವರು ನೇರವಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಮನೆಯಲ್ಲೇ ಒಂದು ವಾರ ಕ್ವಾರಂಟೈನ್‍ಗೆ ಒಳಗಾಗಿ, ಕಿರಾಣಿ ಅಂಗಡಿಯ ನಿರ್ವಹಣೆ ಆರಂಭಿಸಿದ್ದರು.
18 ದಿನದ ಬಳಿಕ ಶಿವಮೊಗ್ಗದ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದ ಬೆಂಗಳೂರಿನ ಅಧಿಕಾರಿಗಳು, ದುಬೈನಿಂದ ಮರಳಿರುವ ವ್ಯಕ್ತಿಯಲ್ಲಿ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದರು.
ವಿಚಾರ ತಿಳಿಯುತ್ತಿದ್ದಂತೆ ಸೋಂಕಿತನನ್ನು ಮೆಗ್ಗಾನ್ ಆಸ್ಪತ್ರೆ ದಾಖಲು ಮಾಡಿ, ಕರೋನ ಪರೀಕ್ಷೆಗೆ ಒಳಪಡಿಸಿದರು. ಅವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸುವ ಕಾರ್ಯ ನಡೆಸಿದರು. ಕಿರಾಣಿ ಅಂಗಡಿ ನಡೆಸುತ್ತಿದ್ದ ಹಿನ್ನೆಲೆ, ಜೆಪಿ ನಗರದಲ್ಲಿ ಕೋವಿಡ್ ಟೆಸ್ಟ್ ನಡೆಸಿದರು.
ಮತ್ತೊಂದೆಡೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಈ ವ್ಯಕ್ತಿ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಲ್ಲಿ ಅವರೊಂದಿಗೆ ಯಾರೆಲ್ಲ ಪ್ರಯಾಣ ಮಾಡಿದ್ದರು ಎಂಬುದನ್ನು ಪತ್ತೆ ಹಚ್ಚುವ ಅನಿವಾರ್ಯತೆ ಸೃಷ್ಟಿಯಾಗಿತ್ತು. ಇದು ಅಧಿಕಾರಿಗಳಿಗೆ ತಲೆನೋವು ತಂದಿತ್ತು.
ದುಬೈನಿಂದ ಮರಳಿದ ವ್ಯಕ್ತಿಯ ಕರೋನ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇನ್ನು ಅವರ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿ ಇದ್ದವರ ವರದಿಯು ನೆಗೆಟಿವ್ ಬಂದಿದೆ. ಇದರಿಂದ ಜನರು ನೆಮ್ಮದಿ ಪಡುವಂತಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422