ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ‘ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ’ ಘೋಷವಾಕ್ಯದಡಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನ.7ರಿಂದ 10ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆರ್.ಸಿ.ಜಗದೀಶ್, ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣ ಪ್ರದರ್ಶನ, ವಿಜ್ಞಾನಿಗಳು–ರೈತರೊಂದಿಗೆ ಸಂವಾದ ಮತ್ತು ವಿಚಾರ ಗೋಷ್ಠಿಯನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮೇಳದಲ್ಲಿ ಏನೇನೆಲ್ಲ ಇರಲಿದೆ?
ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಸಸಿ ಹಾಗೂ ತಳಿಗಳ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ತಂತ್ರಜ್ಞಾನ ಉದ್ಯಾನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಕೃಷಿ– ತೋಟಗಾರಿಕೆ– ಅರಣ್ಯ ಸಮಗ್ರ ಪದ್ಧತಿ, ಕೃಷಿ ಮತ್ತು ತೋಟಗಾರಿಕಾ ವಸ್ತುಪ್ರದರ್ಶನ, ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣ ಪ್ರದರ್ಶನ, ಜೈವಿಕ ಪರಿಕರಗಳ ಪ್ರದರ್ಶನ, ರೈತರು – ವಿಜ್ಞಾನಿಗಳ ಸಂವಾದ ಮತ್ತು ವಿಚಾರ ಗೋಷ್ಠಿ ಏರ್ಪಡಿಸಲಾಗಿದೆ. ಸಿರಿಧಾನ್ಯಗಳ ಮೌಲ್ಯವರ್ಧನೆಗಾಗಿ ಹೆಚ್ಚು ಒತ್ತು ಕೊಟ್ಟು ರೈತರ ಮನಮುಟ್ಟಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಗ್ರ ಕೃಷಿ ಪದ್ಧತಿ, ಅಂತರ್ಜಲ ಮರುಪೂರಣ, ಹೈಟೆಕ್ ತೋಟಗಾರಿಕೆ, ಪುಷ್ಪ ಕೃಷಿ ಮತ್ತು ತಾರಸಿ ತೋಟ, ಜೇನುವನ, ಕೀಟ ಪ್ರಪಂಚ, ಪರಿಸರ ಕೃಷಿ ಪ್ರವಾಸೋದ್ಯಮ, ಸಿರಿಧಾನ್ಯಗಳ ಸತ್ವಗಳ ಮೌಲ್ಯವರ್ಧನೆ ಮತ್ತು ತಾಂತ್ರಿಕತೆ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಹಕಾರ ಕೃಷಿ, ಮೌಲ್ಯವರ್ಧನೆ ಹಾಗೂ ಮಾರಾಟದ ಚರ್ಚಾ ಗೋಷ್ಠಿಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕೃಷಿ ಸಚಿವರಿಂದ ಚಾಲನೆ
ಮೇಳವನ್ನು ನವೆಂಬರ್ 7ರಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡುವರು. ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಂತ್ರಜ್ಞಾನ ಉದ್ಯಾನವನ ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ಕೆ. ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಉಪಸ್ಥಿತರಿರುವರು. ಶಾರದಾ ಪೂರ್ಯಾನಾಯ್ಕ್ ಅಧ್ಯಕ್ಷತೆ ವಹಿಸುವರು ಎಂದು ಕುಲಪತಿ ಆರ್.ಸಿ. ಜಗದೀಶ್ ತಿಳಿಸಿದರು.
ಸಹ್ಯಾದ್ರಿ ಸಿಂಧೂರ ತಳಿ ಬಿಡುಗಡೆ
ಈ ವರ್ಷ ‘ಸಹ್ಯಾದ್ರಿ ಸಿಂಧೂರ’ ಎಂಬ ಸಣ್ಣ ಕೆಂಪಕ್ಕಿ ಭತ್ತದ ತಳಿ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಕೆಎಚ್ಪಿ– 11 ಭತ್ತದ ತಳಿಯನ್ನು ಗುಡ್ಡಗಾಡು ಪ್ರದೇಶದಲ್ಲಿ ಬೆಳೆಯಲು ಬಿಡುಗಡೆ ಮಾಡಲಾಗಿದೆ. ರಾಗಿ ತಳಿ ಕೆಎಂಆರ್– 630 ಮತ್ತು ಬರಗು ತಳಿ ಹಾಗೂ ಸಹ್ಯಾದ್ರಿ ಪ್ರಗತಿ ಎಂಬ ಕಡಲೆ ತಳಿ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ವಿ.ವಿ.ಯ ಗ್ರಂಥಪಾಲಕ ಬಿ.ಕೆ. ಶಿವಣ್ಣ, ವಿಸ್ತರಣಾಧಿಕಾರಿ ಡಾ.ಗಿರಿಜೇಶ್, ಡಾ.ದುಷ್ಯಂತಕುಮಾರ್, ಡಾ.ಹೇಮ್ಲಾ ನಾಯ್ಕ, ಡಾ.ತಿಪ್ಪೇಶ್ ಇದ್ದರು.
ಇದನ್ನೂ ಓದಿ » ಒಂದೇ ಒಂದು ಮೆಸೇಜ್ ಮಾಡಿ ₹3.96 ಲಕ್ಷ ಕಳೆದುಕೊಂಡ ಭದ್ರಾವತಿ ವ್ಯಕ್ತಿ
Agriculture






