ಶಿವಮೊಗ್ಗದಲ್ಲಿ ಕೃಷಿ ಭೂಮಿ ಮಂಜೂರಿಗೆ ಮಾಜಿ ಸೈನಿಕರ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021

ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಶಿವಮೊಗ್ಗ ಘಟಕ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕೆ ಜಮೀನು ಮಂಜೂರು ಮಾಡಬೇಕು. ಆದರೆ ಹಲವು ವರ್ಷಗಳಿಂದ ಭೂ ಮಂಜೂರಾತಿಗಾಗಿ ಮಾಜಿ ಸೈನಿಕರು ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಅಪರ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಮನವಿ ಸಲ್ಲಿಸಿದೆ. ಅಲ್ಲದೆ ಶೀಘ್ರ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಜಮೀನು ಮಂಜೂರು ಮಾಡಲು ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಮಾಜಿ ಸೈನಿಕರ ಬಹು ವರ್ಷದ ಕನಸು ನನಸಾಗುತ್ತಿದೆ ಎಂದು ಮಾಜಿ ಸೈನಿಕರು ತಿಳಿಸಿದ್ದಾರೆ.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ, ಜಿಲ್ಲಾಧ್ಯಕ್ಷ ಹನುಮಂತಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಆರ್. ಹಾಜರಿದ್ದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment