ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ಬಂದ್, ಕಾರಣವೇನು? ಪರ್ಯಾಯ ಮಾರ್ಗವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020

ಆಗುಂಬೆ ಘಾಟಿಯಲ್ಲಿ 12 ಟನ್‍ಗಿಂತಲೂ ಅಧಿಕ ತೂಕದ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜೋರು ಮಳೆಯಾಗುತ್ತಿರುವ ಕಾರಣ ಭಾರೀ ವಾಹನ ಸಂಚಾರನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಎಷ್ಟು ದಿನ ನಿಷೇಧ?

ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಒಂದು ವೇಳೆ ಭಾರೀ ವಾಹನಗಳು ಘಾಟಿಯಲ್ಲಿ ಸಂಚರಿಸಿದರೆ, ಧರೆ ಕುಸಿಯುವ ಸಾಧ್ಯತೆ ಇದೆ. ಇದರಿಂದ ಇತರೆ ವಾಹನಗಳ ಸಂಚಾರವು ಕಷ್ಟವಾಗಲಿದೆ. ಹಾಗಾಗಿ 12 ಟನ್‍ಗಿಂತಲೂ ಅಧಿಕ ಭಾರದ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಜೂನ್ 15ರಿಂದ ಅಕ್ಟೋಬರ್ 15ರವರೆಗೆ ಈ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪಾರ್ಯಾಯ ಮಾರ್ಗ ಯಾವುದು?

12 ಟನ್‍ಗಿಂತಲೂ ಅಧಿಕ ಭಾರದ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

ಪರ್ಯಾಯ ಮಾರ್ಗ 1

ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ ಮೂಲಕ ಮಂಗಳೂರು ತಲುಪಬಹುದಾಗಿದೆ.

ಪರ್ಯಾಯ ಮಾರ್ಗ 2

ಶಿವಮೊಗ್ಗದಿಂದ ತೀರ್ಥಹಳ್ಳಿ ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರದಿಂದ ಉಡುಪಿಗೆ ತಲುಪಬಹುದಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment