ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಸೋಗಾನೆಯಲ್ಲಿ ನಿರ್ಮಾಣ ಆಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಬಂಗಾರಪ್ಪ ಅವರ ಭಾವಚಿತ್ರದ ಮಾಸ್ಕ್ ಧರಿಸಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಧರಣಿ ನಡೆಸಿ, ಮನವಿ ಸಲ್ಲಿಸಿದರು.
ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಡವರು, ರೈತರು, ವಿದ್ಯಾರ್ಥಿಗಳಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದರು. ಅವರಿಂದಾಗಿ ಇವತ್ತು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಂಘಟನೆ ಪ್ರಮುಖರು ತಿಳಿಸಿದರು.
ಹಲವು ಪಕ್ಷದ ರಾಜಕಾರಣಿಗಳು ಬಂಗಾರಪ್ಪ ಅವರ ಗರಡಿಯಲ್ಲೆ ಬೆಳೆದವರು. ಆದ್ದರಿಂದ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.
ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸೊರಬ ತಾಲೂಕು ಅಧ್ಯಕ್ಷ ಜೀವನ್, ವೆಂಕಟೇಶ ನಾಯ್ಕ, ಸಯ್ಯದ್, ಚಂದನ್, ಪವನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200