ಶಿವಮೊಗ್ಗ ಏರ್‌ಪೋರ್ಟ್‌, ಇನ್ನು 20 ದಿನಕ್ಕಷ್ಟೇ ಲೈಸೆನ್ಸ್‌, ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 4 SEPTEMBER 2024 : ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಿಂದ (AIRPORT) ವಿಮಾನಗಳ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನೀಡಿದ್ದ ಅನುಮತಿ ಇನ್ನು 20 ದಿನದಲ್ಲಿ ಮುಕ್ತಾಯಗೊಳ್ಳಲಿದೆ. ಒಂದು ವರ್ಷದ ಅವಧಿಗೆ ಲೈಸೆನ್ಸ್‌ ಅವಧಿ ವಿಸ್ತರಿಸಬೇಕಿದ್ದ ಡಿಜಿಸಿಎ ಈ ಬಾರಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ಲೈಸೆನ್ಸ್‌ ಅವಧಿ ವಿಸ್ತರಿಸಿದೆ.

ಒಂದೇ ತಿಂಗಳು ಲೈಸೆನ್ಸ್‌ ವಿಸ್ತರಣೆ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಕಳೆದ ಬಾರಿ ಒಂದು ವರ್ಷದ ಅವಧಿಗೆ ಲೈಸೆನ್ಸ್‌ ನೀಡಿತ್ತು. ಈ ಅವಧಿ ಆಗಸ್ಟ್‌ 23ಕ್ಕೆ ಮುಕ್ತಾಯಗೊಂಡಿದೆ. ಲೈಸೆನ್ಸ್‌ ನವೀಕರಣದ ವೇಳೆ ಕೆಲವು ಕಾರಣ ನೀಡಿ ಲೈಸೆನ್ಸ್‌ ಅವಧಿಯನ್ನು ಕೇವಲ ಒಂದು ತಿಂಗಳಿಗೆ ವಿಸ್ತರಣೆ ಮಾಡಿದೆ. ಸೆ.23ಕ್ಕೆ ಈ ಅವಧಿ ಮುಗಿಯಲಿದೆ. ಈ ಲೈಸೆನ್ಸ್‌ ಅವಧಿ ನವೀಕರಣಗೊಳ್ಳದೆ ಇದ್ದರೆ ಶಿವಮೊಗ್ಗದಿಂದ ವಿಮಾನಗಳ ಹಾರಾಟಕ್ಕೆ ತೊಡಕಾಗಲಿದೆ.

» ಷರತ್ತುಗಳು ಪೂರ್ತಿಯಾಗಿಲ್ಲ

Shimoga-Airport-Night-View-Terminal

ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್‌ಐಐಡಿಸಿ) ಶಿವಮೊಗ್ಗ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿದೆ. ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಪರವಾನಗಿ ನೀಡುವಾಗ ಸುರಕ್ಷತೆ ಮತ್ತು ಭದ್ರತೆ ವಿಚಾರಗಳ ಬಗ್ಗೆ ಕೆಲವು ಷರತ್ತು ವಿಧಿಸಿತ್ತು. ಕೆಎಸ್‌ಐಐಡಿಸಿ ಸಂಸ್ಥೆಯು ಈ ಷರತ್ತುಗಳನ್ನು ಪೂರ್ತಿಯಾಗಿ ಪೂರೈಸಿಲ್ಲ. ಇದೇ ಕಾರಣಕ್ಕೆ ಈಗ ಡಿಜಿಸಿಎ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ ಅವಧಿಯನ್ನು ಕೇವಲ ಒಂದು ತಿಂಗಳಿಗೆ ನವೀಕರಿಸಿದೆ.

ಡಿಜಿಸಿಎ ನೀಡಿದ ಕಾರಣಗಳೇನು?

ವಿಮಾನ ನಿಲ್ದಾಣದ ರನ್‌ ವೇ ಸುರಕ್ಷತಾ ಪ್ರದೇಶವು ಮಾನದಂಡಕ್ಕೆ ಅನುಗುಣವಾಗಿಲ್ಲ. ರಕ್ಷಣಾ ಸಾಧನಗಳ ಖರೀದಿ ವಿಳಂಬವಾಗಿದೆ. ಫೈರ್‌ ಸೇಫ್ಟಿ ನೋಡಿಕೊಳ್ಳುವ ಸಿಬ್ಬಂದಿ ಕೊರತೆ ಇದೆ. ತ್ವರಿತ ಪ್ರತಿಕ್ರಿಯೆ ತಂಡ (ಕ್ಯೂಆರ್‌ಟಿ) ಇಲ್ಲ. ಭದ್ರತಾ ಸಿಬ್ಬಂದಿ ಸಂಖ್ಯೆ ಕಡಿಮೆ ಇದೆ. ಇವುಗಳನ್ನು ಪೂರೈಸಿದರೆ ಲೈಸೆನ್ಸ್‌ ನವೀಕರಣ ಮಾಡಲಾಗುತ್ತದೆ ಎಂದು ಡಿಜಿಸಿದೆ ತಿಳಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್‌ ವರದಿ ಬಗ್ಗೆ ಮಿನಿಸ್ಟರ್‌ ಮಹತ್ವದ ಹೇಳಿಕೆ

‘ಸಮಸ್ಯೆ ಪರಿಹಾರಕ್ಕೆ ಮುಂದಾಗಲಿ’

BY-Raghavendra-About-Shimoga-Airport

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಈಚೆಗೆ ಕೆಎಸ್‌ಐಐಡಿಸಿ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಸಮಸ್ಯೆಗಳ ಕುರಿತು ಚರ್ಚಿಸಿದ್ದೇನೆ. ಅಗತ್ಯ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದೇನೆ. ಕೆಎಸ್‌ಐಐಡಿಸಿ ಅಧಿಕಾರಿಗಳು ತಕ್ಷಣ ಈ ಸಮಸ್ಯೆಗಳನ್ನು ಪರಿಹರಿಸುವುದು ಸೂಕ್ತ ಎಂದು ತಿಳಿಸಿದರು.

ಮಧ್ಯ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣದ

Indigo-ATR-Flight-in-Shivamogga-Airport-Shimoga-Live-news.webp

ಮಧ್ಯ ಕರ್ನಾಟಕ ಭಾಗದ ಪ್ರಮುಖ ವಿಮಾನ ನಿಲ್ದಾಣವಾಗಿದೆ. ಈಗಾಗಲೇ ಶಿವಮೊಗ್ಗದಿಂದ ಬೆಂಗಳೂರು, ಗೋವಾ, ಹೈದರಾಬಾದ್‌ ಮತ್ತು ತಿರುಪತಿಗೆ ನಿತ್ಯ ವಿಮಾನಗಳು ಹಾರಾಟ ನಡೆಸುತ್ತಿವೆ. ಇಂಡಿಗೋ ಮತ್ತು ಸ್ಟಾರ್‌ ಏರ್‌ಲೈನ್ಸ್‌ ಸೇವೆ ನೀಡುತ್ತಿವೆ. ಸದ್ಯದಲ್ಲೇ ಸ್ಪೈಸ್‌ ಏರ್‌ಲೈನ್ಸ್‌ ಕೂಡ ವಿಮಾನಯಾನ ಆರಂಭಿಸುವ ಸಾಧ್ಯತೆ ಇದೆ.

ಇದನ್ನೂ ಓದಿ » ಬೈಕುಗಳು ಡಿಕ್ಕಿ, ಓರ್ವ ಸವಾರ ಸಾವು, ಮತ್ತಿಬ್ಬರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 4, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment