ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರು ಇಡಬೇಕು ಎಂದು ರಾಜ್ಯ ಚಾಣಕ್ಯ ಸೇವಾ ಸಂಸ್ಥೆ ಆಗ್ರಹಿಸಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, 130ನೇ ಜಯಂತಿ ಅಂಗವಾಗಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು. ಅಂಬೇಡ್ಕರ್ ಅವರ 105 ಅಡಿ ಎತ್ತರದ ಪ್ರತಿಮೆಯನ್ನು ನಿಲ್ದಾಣದ ಆವರಣದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ಬದಲಾಯಿಸಿ ಅಂಬೇಡ್ಕರ್ ಅವರ ಹೆಸರನ್ನು ಇಡಬೇಕು. ಭೋವಿ ಅಭಿವೃದ್ದಿ ನಿಗಮ, ಲಂಬಾಣಿ ತಾಂಡಾ ಅಭಿವೃದ್ಧಿ ನಿಗಮಗಳಿಗೆಲ್ಲ ಅಂಬೇಡ್ಕರ್ ಅವರ ಹೆಸರನ್ನು ಸೇರಿಸಬೇಕು ಎಂದು ಮನವಿ ಮಾಡಿದರು.
ರಾಜ್ಯಾಧ್ಯಕ್ಷ ನಾರಾಯಣ ಐಹೊಳೆ, ಲೋಕೇಶ್ ಮತ್ತಿತರರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422