ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020
ಕರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಇನ್ನು ಮೂರ್ನಾಲ್ಕು ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದ ಸೋಗಾನೆ ಬಳಿ ವಿಮಾನ ನಿಲ್ದಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಕರೋನ ಹಿನ್ನೆಲೆ ಟೆಂಡರ್ ಪ್ರಕ್ರಿಯೆ ತಡವಾಗಿದೆ. ಮೂರ್ನಾಲ್ಕು ದಿನದಲ್ಲಿ ಟೆಂಡರ್ ಪೂರ್ಣಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
100 ಕೋಟಿಯ DRDO ಲ್ಯಾಬ್
ಸೇನೆಗೆ ಅಗತ್ಯವಿರುವ ನೂತನ ತಂತ್ರಜ್ಞಾನ, ಬಯೋ ಕಾಂಪೋಸಿಟ್‍ಗಳು, ಹಲವು ಅವಿಷ್ಕಾರಕ್ಕಾಗಿ ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ DRDO ಲ್ಯಾಬ್ ತೆರೆಯಲು ರಕ್ಷಣಾ ಸಚಿವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಅನುಮೋದನೆ ಸಿಗುವ ಸಾಧ್ಯತೆ ಇದೆ ಎಂದರು.
60 ಕೋಟಿಯ ಆಡಳಿತ ಭವನ
ಸಾರ್ವಜನಿಕರ ಅನುಕೂಲಕ್ಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ರಕ್ಷಣಾಧಿಕಾರಿಕ ಕಚೇರಿಯನ್ನು ಒಳಗೊಂಡ ಆಡಳಿತ ಭವನ ನಿರ್ಮಾಣಕ್ಕೆ ಯೋಜಿಸಲಾಗಿದೆ. ಸುಮಾರು 60 ಕೋಟಿ ವೆಚ್ಚದ ಭವನ ನಿರ್ಮಿಸುವ ಚಿಂತನೆ ಇದೆ ಎಂದರು.
ಸ್ಕಿಲ್ ಪಾರ್ಕ್, ಎಫ್‍ಎಂ ರೇಡಿಯೋ
ಶಿವಮೊಗ್ಗದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಸ್ಕಿಲ್ ಪಾರ್ಕ್ ನಿರ್ಮಾಣ, ಬಹು ವರ್ಷದ ಬೇಡಿಕೆಯಾದ ಎಫ್‍ಎಂ ರೇಡಿಯೋ ಕೇಂದ್ರ ಸ್ಥಾಪನೆ ಆಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು. ಇನ್ನು, ಸಕ್ರೆಬೈಲು ವ್ಯಾಪ್ತಿಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 42 ಎಕರೆಯಲ್ಲಿ ಬಟರ್ ಫ್ಲೈ ಪಾರ್ಕ್ (ಚಿಟ್ಟೆ ವನ), ಡೆಮೊ ಗಾರ್ಡನ್, ವೈದ್ಯಕೀಯ ಸಸ್ಯ ಉದ್ಯಾನ, ಅರಣ್ಯ ಗ್ರಂಥಾಲಯ, ಪಕ್ಷಿ ವೀಕ್ಷಣಾಲಯ, ಓಪನ್ ಜಿಮ್, ಮಕ್ಕಳ ಆಟದ ವನವನ್ನು ಒಳಗೊಂಡ ಜೈವಿಕ ಉದ್ಯಾನ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ ಎಂದರು.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422