ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 21 ಜನವರಿ 2020
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆ ರಾಜ್ಯಾದ್ಯಂತ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶ್ವಾನ ದಳದಿಂದ ಪರಿಶೀಲನೆ
ಶಿವಮೊಗ್ಗದ KSRTC ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ಇವತ್ತು ಶ್ವಾನ ದಳ, ಬಾಂಬ್ ಪತ್ತೆ ದಳದಿಂದ ಪರಿಶೀಲನೆ ನಡೆಯಿತು.
KSRTC ಬಸ್ ನಿಲ್ದಾಣದ ವೇಯ್ಟಿಂಗ್ ರೂಂ, ಕಟ್ಟಡದಲ್ಲಿರುವ ಮಳಿಗೆ, ಲಗೇಜ್ ರೂಂ, ಪಾರ್ಕಿಂಗ್ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಲಾಯಿತು. ಇನ್ನು, ರೈಲ್ವೆ ನಿಲ್ದಾಣದಲ್ಲಿ ರೊಟೀನ್ ಚೆಕಪ್ ನಡೆಸಲಾಯಿತು.
ಜಿಲ್ಲೆಯಾದ್ಯಂತ ಕಟ್ಟೆಚ್ಚರ
ಇನ್ನು, ಬಂದೋಬಸ್ತ್ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತುಗಳು ಕಂಡು ಬಂದಲ್ಲಿ ಕಂಟ್ರೋಲ್ ರೂಂಗೆ ಕರೆ ಮಾಡುವಂತೆ ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಕಂಟ್ರೋಲ್ ರೂಂ ನಂಬರ್ 9480803300.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Alert in Shimoga after a live bomb found in Mangalore Airport. Dog Squad and Bomd Squad checked in KSRTC Bus Stand and Railway Stand.