ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ದೆಹಲಿ ಸ್ಪೋಟದ ಬೆನ್ನಿಗೆ ಶಿವಮೊಗ್ಗದಲ್ಲಿ ಕಟ್ಟೆಚ್ಚರ (Alert) ಮುಂದುವರೆದಿದೆ. ರೈಲು, ಬಸ್ಸು ನಿಲ್ದಾಣಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕರು ಹೆಚ್ಚು ಸೇರುವ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶ್ವಾನ ದಳ ಮತ್ತು ಬಾಂಬ್ ಪತ್ತೆ ದಳದ ಅಧಿಕಾರಿಗಳು ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿ ಹೇಗಿತ್ತು ಸ್ಥಿತಿ?
ಶಿವಮೊಗ್ಗ ಪೊಲೀಸರು ಮತ್ತು ರೈಲ್ವೆ ಪೊಲೀಸರು ಜಂಟಿಯಾಗಿ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ಕಾರ್ಯ ನಡೆಸಿದರು. ಡಿವೈಎಸ್‌ಪಿ ಸಂಜೀವ್ ಕುಮಾರ್, ರೈಲ್ವೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಕಾಶ್ ಅವರ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಲಗೇಜ್ ತಪಾಸಣೆ ನಡೆಸಲಾಯಿತು. ರೈಲುಗಳ ಒಳಗು ಶೋಧ ಕಾರ್ಯಾಚರಣೆ ನಡೆಯಿತು. ರೈಲ್ವೆ ಪೊಲೀಸರು ಮತ್ತು ಶಿವಮೊಗ್ಗ ಪೊಲೀಸರು ಸಭೆ ನಡೆಸಿದರು.
ವಿಮಾನ ನಿಲ್ದಾಣದಲ್ಲಿಯು ತಪಾಸಣೆ
ಇನ್ನು, ವಿಮಾನ ನಿಲ್ದಾಣದಲ್ಲಿಯು ತಪಾಸಣೆ ಬಿಗಿಗೊಳಿಸಲಾಗಿದೆ. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯನ್ನು ಗೇಟ್‌ನಲ್ಲಿ ನಿಯೋಜಿಸಲಾಗಿದೆ. ವಿಮಾನ ನಿಲ್ದಾಣದ ಗೇಟ್ ಬಳಿಯೆ ತಪಾಸಣೆ ಬಿಗಿಗೊಳಿಸಲಾಗಿದೆ. ವಾಹನಗಳು, ಲಗೇಜ್‌ಗಳನ್ನು ಕೂಲಂಕಷವಾಗಿ ತಪಾಸಣೆ ಮಾಡಲಾಗುತ್ತಿದೆ.
ಬಸ್ ನಿಲ್ದಾಣಗಳು, ಶಿವಮೊಗ್ಗ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಇವತ್ತು ಪರಿಶೀಲನೆ ನಡೆಸಲಾಯಿತು. ಇನ್ನು, ವಿವಿಧೆಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಅನುಮಾನಾಸ್ಪದ ವಸ್ತುಗಳು, ವ್ಯಕ್ತಿಗಳು ಕಂಡು ಬಂದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.




ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕುಸಿದು ಬಿದ್ದಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು, ಪತ್ತೆಯಾಗದ ವಾರಸುದಾರರು
Alert
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು
















