ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 17 AUGUST 2024 : ಭಾರತೀಯ ವೈದ್ಯಕೀಯ ಸಂಘದ ಸೂಚನೆ ಮೇರೆಗೆ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಇಂದು ಹೊರ ರೋಗಿ (OPD) ವಿಭಾಗವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆವರೆಗೆ ಹೊರ ರೋಗಿ ವಿಭಾಗವನ್ನು ಬಂದ್ ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೋಲ್ಕತ್ತಾ ಪ್ರಕರಣದ ಹಿನ್ನೆಲೆ ಬಂದ್
ಪಶ್ಚಿಮ ಬಂಗಾಳ ರಾಜ್ಯದ ಕೋಲ್ಕತ್ತಾದ ಆರ್ಜಿಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿತ್ತು. ಘಟನೆ ಖಂಡಿಸಿ ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಬಂದ್ಗೆ ಭಾರತೀಯ ವೈದ್ಯಕೀಯ ಸಂಘ ಸೂಚನೆ ನೀಡಿದೆ. ಈ ಹಿನ್ನೆಲೆ 24 ಗಂಟೆ ಹೊರರೋಗಿ ವಿಭಾಗವನ್ನು ಬಂದ್ ಮಾಡಲಾಗುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತು ಬೇರೆ ಚಿಕಿತ್ಸೆ ಲಭ್ಯವಿರುವುದಿಲ್ಲ. ಒಳ ರೋಗಿ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?