129 ರೂಟ್, 133 ಬಸ್, ಪರೀಕ್ಷಾ ಕೇಂದ್ರದ ಸುತ್ತಲು ಸ್ಯಾನಿಟೈಸರ್, ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ಶಿವಮೊಗ್ಗ ರೆಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜೂನ್ 2020

104483797 890533651426546 893018903127869598 n.jpg? nc cat=109& nc sid=8024bb& nc ohc=4sy4qcACV9QAX 284yQ& nc ht=scontent.fblr1 3

ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷೆ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಪಿಯುಸಿ ಪರೀಕ್ಷೆ ನಡೆಯಲಿರುವ ಎಲ್ಲಾ 33 ಕೇಂದ್ರಗಳನ್ನು ಈಗಾಗಲೆ ಎರಡು ಬಾರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಕೊಠಡಿಯನ್ನು ಹಸ್ತಾಂತರಿಸುವ ಪೂರ್ವದಲ್ಲಿ ಇನ್ನೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ ಎಂದರು.

103795325 1145764109118341 2232653874546509040 o.jpg? nc cat=108& nc sid=8024bb& nc ohc=eid18HZFC EAX8uvD8A& nc ht=scontent.fblr11 1

ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ

ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸಿಕೊಂಡು ಬರಲು ಸೂಚಿಸಲಾಗಿದೆ. ಆದರೂ ಪ್ರತಿಯೊಬ್ಬ ವಿದ್ಯಾರ್ಥಿಗೂ ಒಂದು ಮಾಸ್ಕ್ ಒದಗಿಸಬೇಕು. ಇದೇ ರೀತಿ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ನೀರು ಹಾಗೂ ಬಿಸ್ಕಿಟ್ ಪ್ಯಾಕೇಟ್ ನೀಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

129 ರೂಟ್, 133 ಬಸ್

ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‍ಗಳಿಗೆ 133 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‍ಗೆ ಒಬ್ಬರು ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್ ಅಧಿಕಾರಿ ಜವಾಬ್ದಾರಿ ಮಾಡಲಾಗುವುದು ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಪೂರ್ಣ ಸಿದ್ಧತೆ

ಇದೇ ರೀತಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಲೋಪ ಉಂಟಾಗದಂತೆ ಮುನ್ನಚ್ಚರಿಕೆ ವಹಿಸಬೇಕು. ಒಟ್ಟು 84 ಕೇಂದ್ರಗಳಿದ್ದು, ಗ್ರಾಮೀಣ ಭಾಗದಲ್ಲಿ 40 ಹಾಗೂ ನಗರ ಪ್ರದೇಶದಲ್ಲಿ 44 ಕೇಂದ್ರಗಳಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು 239 ಬಸ್ ವ್ಯವಸ್ಥೆ ಮಾಡಲಾಗಿದೆ. 189 ರೂಟ್‍ಗಳಲ್ಲಿ ಒಟ್ಟು 336 ಪಾಯಿಂಟ್ ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆ ತರಲು ರೂಟ್ ಬಸ್‍ಗಳನ್ನು ಹೊರತುಪಡಿಸಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಿಂದ ಸ್ವಲ್ಪ ದೂರದಲ್ಲಿ ಬಿಸಿಯೂಟ ವ್ಯವಸ್ಥೆ ಮಾಡಬೇಕು ಎಂದು ಸಚಿವರು ತಿಳಿಸಿದರು.

ಹಾಲ್‍ ಟಿಕೆಟ್ ಜೊತೆಗೆ ಮೂರು ಮಾಸ್ಕ್

ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯಲು ಬರುವ ಸಂದರ್ಭದಲ್ಲಿ 3 ಮಾಸ್ಕ್ ಒದಗಿಸಲು ಸೂಚಿಸಲಾಗಿದೆ. ಸುಗಮವಾಗಿ ಪರೀಕ್ಷೆ ನಡೆಸಲು ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಾಲಕರು ಸಹ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಡಿಡಿಪಿಯು ನಾಗರಾಜ ಕಾಗಲಕರ್, ಡಿಡಿಪಿಐ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment