ಸರ್ಕಾರಿ ವಾಹನದಲ್ಲಿ ನಕಲಿ ಅಧಿಕಾರಿ, ಕಂಡ ಕಂಡ ಅಂಗಡಿ ಮೇಲೆ ನಡೆಸಿದನಾ ದಾಳಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2022

SHIMOGA |ಸರ್ಕಾರಿ ವಾಹನದಲ್ಲಿ ಬಂದ ನಕಲಿ ಅಧಿಕಾರಿ (FAKE OFFICER), ಅಂಗಡಿ ಮಾಲೀಕರೊಬ್ಬರಿಗೆ ದಂಡ ಹಾಕುವ ಬೆದರಿಕೆ ಒಡ್ಡಿದ್ದಾನೆ. ಇದರಿಂದ ವಿನಾಯಿತಿ ಬೇಕಿದ್ದರೆ ತನಗೆ ಹಣ ನೀಡಬೇಕು ಎಂದು ಸೂಚನೆ ಕೊಟ್ಟಿದ್ದಾನೆ. ಈತನ ಅಸಲಿ ಬಣ್ಣ ಬಯಲಾಗುತ್ತಿದ್ದಂತೆ ಅಂಗಡಿ ಮಾಲೀಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Shimoga Nanjappa Hospital

ವಿನೋಬನಗರದ ಎಪಿಎಂಸಿ ಬಳಿ 100 ಅಡಿ ರಸ್ತೆಯಲ್ಲಿರುವ ಗೊರೂರು ಮಾರ್ಟ್ ನಲ್ಲಿ ಘಟನೆ ಸಂಭವಿಸಿದೆ. ಮಾಲೀಕ ಕುಮಾರ್ ಅವರಿಂದ ಹಣ ವಸೂಲಿಗೆ ಯತ್ನಿಸಿದ ನಕಲಿ ಫುಡ್ ಇನ್ಸ್ ಪೆಕ್ಟರ್ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

(FAKE OFFICER)

ಅಸಲಿ ಜೀಪಲ್ಲಿ ಬಂದ ನಕಲಿ ಅಧಿಕಾರಿ

ಭಾನುವಾರ ಸಂಜೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಬೋರ್ಡ್ ಇರುವ ಜೀಪಿನಲ್ಲಿ ಬಂದ ವ್ಯಕ್ತಿಯೊಬ್ಬ, ಗೊರೂರು ಮಾರ್ಟ್ ಒಳಗೆ ಬಂದು ತನ್ನನ್ನು ಫುಡ್ ಇನ್ಸ್ ಪೆಕ್ಟರ್ ಗಂಗಾಧರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂಗಡಿಯೊಳಗೆ ಪರಿಶೀಲನೆ ನಡೆಸಿದ್ದಾನೆ. ಕೆಲವು ವಸ್ತುಗಳ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಇದನ್ನು ಮಾರಾಟ ಮಾಡುವಂತಿಲ್ಲ ಎಂದು ತಕರಾರು ತೆಗೆದಿದ್ದಾನೆ. ಅಲ್ಲದೆ ಜೀಪಿನಲ್ಲಿದ್ದ ವ್ಯಕ್ತಿಗೆ ರಶೀದಿ ಪುಸ್ತಕ ತರಲು ಸೂಚಿಸಿದ್ದಾನೆ.

(FAKE OFFICER)

ವ್ಯವಹಾರ ಆರಂಭಿಸಿದ ಇನ್ಸ್ ಪೆಕ್ಟರ್

ರಶೀದಿ ಪುಸ್ತಕ ಕೈಯಲ್ಲಿ ಹಿಡಿದು 25 ಸಾವಿರ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಗೊರೂರು ಮಾರ್ಟ್ ಮಾಲೀಕ ಕುಮಾರ್ ಅವರಿಗೆ ಬೆದರಿಕೆ ಒಡ್ಡಿದ್ದಾನೆ. ದಂಡದಿಂದ ವಿನಾಯಿತಿ ನೀಡಬೇಕಿದ್ದರೆ ತನಗೆ ಹಣ ಕೊಡಬೇಕು ಎಂದು ಸೂಚಿಸಿದ್ದಾನೆ. ಮೊದಲಿಗೆ 2 ಸಾವಿರ ರೂ. ಹಣ ಪಡೆದಿದ್ದಾನೆ. ಇನ್ನೂ 10 ರಿಂದ 12 ಸಾವಿರ ರೂ. ಖರ್ಚಾಗಲಿದೆ. ಅಂಗಡಿಯ ದಾಖಲೆಗಳನ್ನು ಪರಿಶೀಲಿಸಬೇಕಿರುವುದರಿಂದ ಮರುದಿನ ಬರುವುದಾಗಿ ತಿಳಿಸಿ ಜೀಪಿನಲ್ಲಿ ತೆರಳಿದ್ದಾನೆ.

ಓಡಿ ಹೋದ ‘ಫುಡ್ ಇನ್ಸ್ ಪೆಕ್ಟರ್’

ಸೋಮವಾರ ಸಂಜೆ ಗೊರೂರು ಮಾರ್ಟ್ ಹೊರಗೆ ಜನ ಜಮಾಯಿಸಿದ್ದರು. ಒಳಗೆ ಕೆಲಸ ಮಾಡುತ್ತಿದ್ದ ಮಾಲೀಕ ಕುಮಾರ್ ಅವರು, ದಿಢೀರ್ ಜನ ಸೇರಿದ್ದನ್ನು ಗಮನಿಸಿ ಹೊರಗೆ ಬಂದಿದ್ದಾರೆ. ಫುಡ್ ಸೇಫ್ಟಿ ಇನ್ಸ್ ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದ ಗಂಗಾಧರ್ ಗಂಗಾಧರ್ ಎಂಬಾತನನ್ನು ಜನರು ಹಿಡಿದುಕೊಳ್ಳಲು ಯತ್ನಿಸುತ್ತಿದ್ದರು. ಆಗ ಅತ ಸ್ಥಳದಿಂದ ಓಡಿ ಹೋಗಿದ್ದಾನೆ.

ಕ್ಲಿಕ್ ಮಾಡಿ ಇದನ್ನೂ ಓದಿ ಸಹ್ಯಾದ್ರಿ ಕಾಲೇಜು ಕಾಂಪೌಂಡ್ ಧ್ವಂಸ, ಗಂಧದ ಮರಗಳು ಕಟ್

ಫುಡ್ ಸೇಫ್ಟಿ ಇನ್ಸ್ ಪೆಕ್ಟರ್ ಎಂದು ಹೇಳಿಕೊಂಡು, ತಮ್ಮ ಅಂಗಡಿಗೆ ಬಂದು ದಂಡ ಹಾಕುವುದಾಗಿ ಬೆದರಿಕೆ ಒಡ್ಡಿ, ಹಣ ಪಡೆದ ಆರೋಪಿ ವಿರುದ್ಧ, ಮಾಲೀಕ ಕುಮಾರ್ ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2022

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment