ಶಿವಮೊಗ್ಗ LIVE
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಆಳ್ವಾಸ್ ಸಾಂಸ್ಕೃತಿಕ ವೈಭವ (Alva’s Cultural Event) ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಶಿವಮೊಗ್ಗದ ನಾಗರಿಕರ ಮುಂದೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ರೋಮಾಂಚನಕಾರಿ ಪ್ರದರ್ಶನ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕುಟುಂಬಗಳನ್ನು ಒಗ್ಗೂಡಿಸಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳು ಈ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಡಾ. ಮೋಹನ್ ಆಳ್ವಾ ಅವರು ಮತ್ತಷ್ಟು ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಲಿ’ ಎಂದರು.
![]()
ಗೌರವಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪ್ರಸ್ತಾವಿಕವಾಗಿ ಮಾತನಾಡಿದರು. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಮಾಜಿ ಎಂಎಲ್‌ಸಿ ಆರ್.ಪ್ರಸನ್ನ ಕುಮಾರ್, ಎಸ್.ಪಿ.ದಿನೇಶ್, ಉದ್ಯಮಿ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಮುಖಂಡರಾದ ಎಸ್.ಎಸ್.ಜ್ಯೋತಿಪ್ರಕಾಶ್, ಎಂ.ಶ್ರೀಕಾಂತ್, ವಿಜಯಕುಮಾರ್ ಸಂತೇಕಡೂರು, ಎನ್.ಮಂಜುನಾಥ, ಶಾಂತಾ ಸುರೇಂದ್ರ, ಬಳ್ಳೆಕೆರೆ ಸಂತೋಷ್, ಮೋಹನ್‌ಕುಮಾರ್ ಇತರರಿದ್ದರು.
ಇದನ್ನೂ ಓದಿ » ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
ಏನೇನೆಲ್ಲ ಪ್ರದರ್ಶನವಿತ್ತು?
ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಯೋಗ ದೀಪಿಕ, ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ ಶ್ರೀರಾಮ ಪಟ್ಟಾಭಿಷೇಕ, ತೆಂಕುತಿಟ್ಟಿನ ಅಗ್ರಪೂಜೆ, ಗಾರ್ಭ, ದಾಂಡಿಯಾ, ಮಣಿಪುರಿ ಸ್ಟಿಕ್ ಡ್ಯಾನ್ಸ್, ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್, ಪುರಲಿಯಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಮಂತ್ರ ಮುಗ್ಧಗೊಳಿಸಿದವು. ಇಲ್ಲಿವೆ ಫೋಟೊಗಳು.






















LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






