ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಆಳ್ವಾಸ್‌ ಸಾಂಸ್ಕೃತಿಕ ವೈಭವ (Alva’s Cultural Event) ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಶಿವಮೊಗ್ಗದ ನಾಗರಿಕರ ಮುಂದೆ ಆ‍ಳ್ವಾಸ್‌ ಶಿಕ್ಷಣ ಸಂಸ್ಥೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ರೋಮಾಂಚನಕಾರಿ ಪ್ರದರ್ಶನ ನೀಡಿದರು.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕುಟುಂಬಗಳನ್ನು ಒಗ್ಗೂಡಿಸಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳು ಈ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಡಾ. ಮೋಹನ್‌ ಆಳ್ವಾ ಅವರು ಮತ್ತಷ್ಟು ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಲಿ’ ಎಂದರು.

QUOTE LOGO NEW jpg

ಸೌಂದರ್ಯ ಪ್ರಜ್ಞೆ ಇರುವವರು ದೇಶ, ಕಲೆ ಮತ್ತು ಸಾಮರಸ್ಯದ ಬದುಕನ್ನು ಪ್ರೀತಿಸುತ್ತಾರೆ. ಸೌಂದರ್ಯ ಪ್ರಜ್ಞೆ ಇಲ್ಲದವರು ಇಡೀ ಜಗತ್ತಿಗೆ ಅಪಾಯಕಾರಿ. ಆದ್ದರಿಂದ ಸೌಂದರ್ಯ ಪ್ರಜ್ಞೆ ಇರುವ ಮಾನವ ಸಂಪತ್ತು ಸೃಷ್ಟಿಸುವುದು ನಮ್ಮ ಗುರಿ.ಡಾ. ಮೋಹನ್‌ ಆಳ್ವ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ

ಗೌರವಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪ್ರಸ್ತಾವಿಕವಾಗಿ ಮಾತನಾಡಿದರು. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಮಾಜಿ ಎಂಎಲ್‌ಸಿ ಆರ್.ಪ್ರಸನ್ನ ಕುಮಾರ್‌, ಎಸ್.ಪಿ.ದಿನೇಶ್, ಉದ್ಯಮಿ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಮುಖಂಡರಾದ ಎಸ್.ಎಸ್.ಜ್ಯೋತಿಪ್ರಕಾಶ್, ಎಂ.ಶ್ರೀಕಾಂತ್, ವಿಜಯಕುಮಾ‌ರ್ ಸಂತೇಕಡೂರು, ಎನ್.ಮಂಜುನಾಥ, ಶಾಂತಾ ಸುರೇಂದ್ರ, ಬಳ್ಳೆಕೆರೆ ಸಂತೋಷ್, ಮೋಹನ್‌ಕುಮಾ‌ರ್ ಇತರರಿದ್ದರು.

ಇದನ್ನೂ ಓದಿ » ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ

ಏನೇನೆಲ್ಲ ಪ್ರದರ್ಶನವಿತ್ತು?

ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಯೋಗ ದೀಪಿಕ, ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ ಶ್ರೀರಾಮ ಪಟ್ಟಾಭಿಷೇಕ, ತೆಂಕುತಿಟ್ಟಿನ ಅಗ್ರಪೂಜೆ, ಗಾರ್ಭ, ದಾಂಡಿಯಾ, ಮಣಿಪುರಿ ಸ್ಟಿಕ್ ಡ್ಯಾನ್ಸ್, ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್, ಪುರಲಿಯಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಮಂತ್ರ ಮುಗ್ಧಗೊಳಿಸಿದವು. ಇಲ್ಲಿವೆ ಫೋಟೊಗಳು. 

Alva's Cultural Event in Shimoga freedom Park

Leave a Comment