SHIVAMOGGA LIVE | 17 JUNE 2023
SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಅಮೃತ ನಡಿಗೆ (Amurtha Nadige) ಆಯೋಜಿಸಲಾಗಿತ್ತು. ನಗರದ ಆರು ಕಡೆಯಿಂದ ಆರು ಪ್ರತ್ಯೇಕ ತಂಡವಾಗಿ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಆರು ತಂಡಗಳು ಗೋಪಿ ವೃತ್ತದಲ್ಲಿ ಒಗ್ಗೂಡಿ ಎನ್‌ಇಎಸ್ ಮೈದಾನದವರೆಗೆ ಮೆರವಣಿಗೆ (Amurtha Nadige) ನಡೆಸಿದರು. ಶಿಕ್ಷಣ ಸಂಸ್ಥೆ ಪರವಾಗಿ ಘೋಷಣೆ ಕೂಗುತ್ತ, ಸಾಮೂಹಿಕವಾಗಿ ವಿವಿಧ ಹಾಡುಗಳನ್ನು ಹೇಳುತ್ತ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ 36 ವಿದ್ಯಾ ಸಂಸ್ಥೆಗಳನ್ನು ಹೊಂದಿದೆ. ಈ ಸಂಸ್ಥೆಗಳಿಂದ 12 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ NES ಹಬ್ಬ, 6 ಕಡೆಯಿಂದ ಅಮೃತ ನಡಿಗೆ, ಡಾ.ವೀರೇಂದ್ರ ಹೆಗ್ಗಡೆ, ವಸಿಷ್ಠ ಸಿಂಹ, ಗಂಗಾವತಿ ಪ್ರಾಣೇಶ್ ಭಾಗಿ
ಮೆರವಣಿಗೆ ಬಳಿಕ ಎನ್‌ಇಎಸ್ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಳಿಕ ಅಮೃತ ಮಹೋತ್ಸವದ ಹೀಲಿಯಂ ಬಲೂನು ಹಾರಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಅನಂತದತ್ತಾ, ಹೆಚ್.ಸಿ.ಶಿವಕುಮಾರ್, ಮಧುರಾವ್, ವಿಜಯ್ ದಿನಕರ್, ರುಕ್ಮಿಣಿ ವೇದವ್ಯಾಸ, ರವೀಂದ್ರ, ಗುರುಪ್ರಸಾದ್, ರಾಮಪ್ರಸಾದ್, ಆನಂದ, ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಆಡಳಿತಾಧಿಕಾರಿ ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇಲ್ಲಿದೆ ಫೋಟೊ ಆಲ್ಬಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200