ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020
ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅಂಗನಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದು, ತಮಗೆ ಪ್ರತಿ ತಿಂಗಳೂ ಸರಿಯಾಗಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಬೇಕು. ಜೊತೆಗೆ ಕಳೆದ ಆರು ತಿಂಗಳಿನಿಂದ ವೇತನ ಬಾಕಿಯಿದ್ದು, ಕೂಡಲೇ ವೇತನ ನೀಡಬೇಕು. ಕೋವಿಡ್ ಕೆಲಸವನ್ನೂ ಮಾಡುತ್ತಿರುವುದರಿಂದ ಮಾಸಿಕ 10 ಸಾವಿರ ಹೆಚ್ಚುವರಿ ವೇತನ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]