SHIVAMOGGA LIVE NEWS | 16 FEBRURARY 2023
SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ (controversy statement) ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್.ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ – ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದವರನ್ನು ಬಿಜೆಪಿ ನಾಯಕರು ಆರಾಧಿಸುತ್ತಿದ್ದಾರೆ. ಇಂತಹ ನಾಯಕರಿಂದ ಪ್ರೀತಿ, ಕರುಣೆ, ಸ್ನೇಹ ನಿರೀಕ್ಷಸಲು ಸಾಧ್ಯವಿಲ್ಲ. ಸಚಿವರೊಬ್ಬರು ಬಹಿರಂಗವಾಗಿಯೇ ಪ್ರಚೋದನಕಾರಿ ಹೇಳಿಕೆ ನೀಡದ್ದಾರೆ. ಆದರೆ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಪ್ರತಿಕ್ರಿಯೆ ನೋಡಿದರೆ ಬಿಜೆಪಿಯ ನಿಜ ಸಂಸ್ಕೃತಿ ರಾಜ್ಯದ ಜನರಿಗೆ ಅರ್ಥವಾಗುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ – ಅಗಲಿದ ಪ್ರಾಂಶುಪಾಲರಿಗೆ ಕಣ್ಣೀರ ವಿದಾಯ, ಘೋಷಣೆಯೊಂದಿಗೆ ಕಾಲೇಜು ಆವರಣದಲ್ಲಿ ಅಂತಿಮ ನಮನ
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಪ್ರಮುಖರಾದ ಕೆ.ರಂಗನಾಥ್, ಕಲೀಮ್ ಪಾಷಾ, ಬಿ.ಲೋಕೇಶ್, ಎಸ್.ಕುಮರೇಶ್, ಆರ್.ಕಿರಣ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.