ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020
ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕತ್ತರಿ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಪಕ್ಷದ ಕಿಸಾನ್ ಘಟಕ ಖಂಡಿಸಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಲಾಯಿತು.
ಜುಲೈ ತಿಂಗಳಿಂದ ಪ್ರತಿ ಫಲಾನುಭವಿಗೆ 3 ಕೆ.ಜಿ. ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. ಕರೋನದಿಂದಾಗಿ ಬಡವರು, ಕೂಲಿ ಕಾರ್ಮಿಕರಿಗೆ ದುಡಿಮೆ ಇಲ್ಲದಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಪೂರೈಸುತ್ತಿರುವ ಅಕ್ಕಿಯಲ್ಲಿ ಸರ್ಕಾರ ಕಡಿತ ಮಾಡಿರುವುದು ಸರಿಯಲ್ಲ ಎಂದು ಕಿಸಾನ್ ಘಟಕದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
2017ರಲ್ಲಿ ಸಿದ್ದರಾಮಯ್ಯ ಅವರು ಪ್ರತಿ ಫಲಾನುಭವಿಗೆ 7 ಕೆ.ಜಿ. ಅಕ್ಕಿ ಕೊಡುತ್ತಿದ್ದರು. ಆದರೆ ಈಗಿನ ಸರ್ಕಾರ ಮೊದಲಿಗೆ ಪ್ರತಿ ಫಲಾನುಭವಿಗೆ 5 ಕೆ.ಜಿ. ಅಕ್ಕಿ ಕೊಡುವುದಾಗಿ ತಿಳಿಸಿತ್ತು. ಈಗ ಮತ್ತೆ ಎರಡು ಕೆ.ಜಿ.ಯಷ್ಟು ಕಡಿತಗೊಳಿಸಲು ನಿರ್ಧರಿಸಿದೆ. ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು. ಇಲ್ಲವಾದರೆ ಬಡವರು ಮತ್ತು ರೈತರಿಗೆ ಹೆಚ್ಚು ತೊಂದರೆ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಿಸಾನ್ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಗಿರೀಶ್, ಸೂಡೂರು ಶಿವು, ಮಲವಗೊಪ್ಪ ಶಿವರು, ಅರುಣ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422