ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ಸೋಂಕಿತ ಬಲಿ, ಇವತ್ತು 10 ಮಂದಿಗೆ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021

ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 349ಕ್ಕೆ ಏರಿಕೆ ಆಗಿದೆ.

ಕರೋನಾಗೆ ವರ್ಷದ ಮೊದಲ ಸಾವು

ಕರೋನಾಗೆ ತುತ್ತಾಗಿದ್ದ ಸೋಂಕಿತರೊಬ್ಬರು ಇವತ್ತು ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ ಇದು ಮೊದಲ ಸಾವಿನ ಪ್ರಕರಣವಾಗಿದೆ.

ಇವತ್ತು 10 ಮಂದಿಗೆ ಪಾಸಿಟಿವ್

ಇವತ್ತು ಹತ್ತು ಮಂದಿಗೆ ಕರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 4, ಭದ್ರಾವತಿ 1, ತೀರ್ಥಹಳ್ಳಿ 2, ಸಾಗರದಲ್ಲಿ 3 ಪ್ರಕರಣ ವರದಿಯಾಗಿದೆ.

ನೂರು ಮಂದಿಗೆ ಚಿಕಿತ್ಸೆ

ಜಿಲ್ಲೆಯಲ್ಲಿ ಸದ್ಯ ನೂರು ಮಂದಿ ಕರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 46 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ 6 ಮಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 48 ಮಂದಿ ಮನೆಯಲ್ಲಿ ಐಸೊಲೇಷನ್‍ನಲ್ಲಿದ್ದಾರೆ. ಇವತ್ತು 18 ಮಂದಿ ಗುಣವಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment