SHIVAMOGGA LIVE NEWS |4 JANUARY 2023
SHIMOGA : ಮೇಯರ್, ಉಪ ಮೇಯರ್ ಚುನಾವಣೆ ಬೆನ್ನಿಗೆ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳ ಚುನಾವಣೆಗೆ (election) ದಿನಾಂಕ ನಿಗದಿಯಾಗಿದೆ. ಜ.7ರಂದು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣೆ (election) ನಡೆಸುವ ಸಂಬಂಧ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಸೂಚನೆ ನೀಡಿದ್ದಾರೆ. ಜ.7ರಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಆ ದಿನ ಬೆಳಗ್ಗೆ 9 ಗಂಟೆಯಿಂದ 10 ಗಂಟೆವರೆಗೆ ನಾಮ ನಿರ್ದೇಶನ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 31 ಜಿಲ್ಲಾ ಪಂಚಾಯಿತಿ ಕ್ಷೇತ್ರ ಪ್ರಕಟ, ಯಾವ್ಯಾವ ಊರು ಯಾವ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ? ಇಲ್ಲಿದೆ ಲಿಸ್ಟ್
ಮಹಾನಗರ ಪಾಲಿಕೆಯಲ್ಲಿ ನಾಲ್ಕು ಸ್ಥಾಯಿ ಸಮಿತಿಗಳಿವೆ. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ, ಲೆಕ್ಕಪತ್ರಗಳ ಸ್ಥಾಯಿ ಸಮಿತಿಗಳಿವೆ.