ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021
ಶಿವಮೊಗ್ಗಕ್ಕೆ ಮತ್ತೊಂದು ಕೇಂದ್ರಿಯ ವಿದ್ಯಾಲಯ ಬರಲಿದೆ. ಮಾನವ ಸಂಪನ್ಮೂಲ ಇಲಾಖೆ ಈ ಸಂಬಂಧ ಘೋಷಣೆ ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ಭೇಟಿ ನೀಡುತ್ತಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಹೊಸ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5 ಎಕರೆ ಸ್ಥಳ ಗುರುತಿಸಲಾಗಿದ್ದು, ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಡಿಆರ್‍ಡಿಒ ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.
ವಿಡಿಯೋ ರಿಪೋರ್ಟ್ | ಕ್ಲಿಕ್ ಮಾಡಿ, ವಿಡಿಯೋ ನೋಡಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422