ಶಿವಮೊಗ್ಗದಲ್ಲಿ ಮತ್ತೊಂದು ಬರ್ಬರ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಇಬ್ಬರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | SHIMOGA| 18 ಜುಲೈ 2022

ಶಿವಮೊಗ್ಗ ನಗರದಲ್ಲಿ ಮತ್ತೊಬ್ಬ ರೌಡಿ ಶೀಟರ್ (ROWDY SHEETER) ಬರ್ಬರ ಹತ್ಯೆಗೆ ಸಂಚು (MURDER PLAN) ರೂಪಿಸಿದ್ದ ಸಂಗತಿ ಬಯಲಾಗಿದೆ. ಈ ಸಂಬಂಧ ಮೂವರು ಸಂಚುಕೋರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Shimoga Nanjappa Hospital

ರೌಡಿ ಶೀಟರ್ ಅನಿಲ ಅಲಿಯಾಸ್ ಅಂಬು ಎಂಬಾತನ ಹತ್ಯೆಗೆ ಪ್ಲಾನ್ ಸಿದ್ಧವಾಗಿತ್ತು. ಈ ಸಂಬಂಧ ವಿಘ್ನೇಶ್ ಮತ್ತು ಕಿರಣ್ ಕುಮಾರ್ ಎಂಬುವವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ಕೆಚ್ ಸಿದ್ಧವಾಗಿತ್ತು

ರೌಡಿ ಶೀಟರ್ ಬಂಕ್ ಬಾಲು ಹತ್ಯೆ ಪ್ರಕರಣದಲ್ಲಿ ರೌಡಿ ಶೀಟರ್ ಅನಿಲ ಅಲಿಯಾಸ್ ಅಂಬು ಪ್ರಮುಖ ಪಾತ್ರ ವಹಿಸಿದ್ದ ಆರೋಪವಿದೆ. ಈ ಹಿನ್ನೆಲೆ ಅನಿಲನನ್ನು ಹತ್ಯೆ ಮಾಡಲು ಬಂಕ್ ಬಾಲು ಸಹಚರರು ಯೋಜನೆ ರೂಪಿಸಿದ್ದರು. ಬಂಕ್ ಬಾಲು ಸಹಚರರಾದ ವಿಘ್ನೇಶ್ ಮತ್ತು ಚಂದನ್ ಹತ್ಯೆಗೆ ಸ್ಕೆಚ್ ಸಿದ್ಧಪಡಿಸಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಯುಧಗಳು, ಕಾರು ರೆಡಿ ಇತ್ತು

ರೌಡಿ ಶೀಟರ್ ಅನಿಲನನ್ನು ಹತ್ಯೆ ಮಾಡಲು ವಿಘ್ನೇಶ್ ಮತ್ತು ಚಂದನ್ ಮಾರಕಾಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದ್ದರು. ಆಯುಧಗಳನ್ನು ಖರೀದಿಸಿ, ಕಿರಣ್ ಕುಮಾರ್ ಅಲಿಯಾಸ್ ಕುಟ್ಟಿ ಎಂಬಾತನ ಮನೆಯಲ್ಲಿ ಇಟ್ಟಿದ್ದರು. ಅಲ್ಲದೆ ಕಿರಣ, ಹಣ ಮತ್ತು ವಾಹನದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದ ಎಂದು ವಿಜ್ಞೇಶ್ ಮತ್ತು ಚಂದನ್ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

ವಿನೋಬನಗರ ಪೊಲೀಸ್ ಚೌಕಿಯಲ್ಲಿ ರೌಡಿ ಶೀಟರ್ ಅಣ್ಣಪ್ಪ ಅಲಿಯಾಸ್ ಹೊನ್ನಪ್ಪ ಅಲಿಯಾಸ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಂಧನಕ್ಕೆ ಪೊಲೀಸರು ನಾಲ್ಕು ತಂಡ ರಚನೆ ಮಾಡಿದ್ದರು. ಪ್ರಕರಣ ಸಂಬಂಧ ಕೆಲವರ ವಿಚಾರಣೆ ನಡೆಸಲಾಗುತ್ತಿತ್ತು. ಈ ವೇಳೆ ಅನಿಲ ಅಲಿಯಾಸ್ ಅಂಬು ಹತ್ಯೆ ಪ್ರಕರಣ ಬಯಲಾಗಿದೆ.

ಬುದ್ಧಾನಗರದ ವಿಘ್ನೇಶ್ (25) ಮತ್ತು ಓ.ಟಿ.ರಸ್ತೆಯ ಕಿರಣ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ನಡುರಸ್ತೆಯಲ್ಲಿ ಹಂದಿ ಅಣ್ಣಿ ಹತ್ಯೆ ಕೇಸ್, ಎಫ್ಐಆರ್’ನಲ್ಲಿ ಏನಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment