ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 SEPTEMBER 2023
SHIMOGA : ಕುಂದಾಪುರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ ಹತ್ತುವ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ (Vanity Bag) ಚಿನ್ನಾಭರಣ ಇದ್ದ ಪರ್ಸ್ ಕಳ್ಳತನವಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಇಂತಹ ಪ್ರಕರಣಗಳು ಹೆಚ್ಚಾಗಿವೆ.
ಕುಂದಾಪುರದ ರತ್ನಾ ಆರ್.ಭಟ್ ಎಂಬುವವರು ಬೆಂಗಳೂರಿನಲ್ಲಿ ಮದುವೆ ಸಮಾರಂಭಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಯನಗರದಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದಿದ್ದು ಸೆ.23ರಂದು ಕುಂದಾಪುರಕ್ಕೆ ತೆರಳಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ತೆರಳಿದ್ದರು. ಪತಿಯೊಂದಿಗೆ ಬಸ್ ಹತ್ತಿ ಕುಳಿತಾಗ ವ್ಯಾನಿಟಿ ಬ್ಯಾಗ್ ಜಿಪ್ ತೆಗೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ವ್ಯಾನಿಟಿ ಬ್ಯಾಗಿನೊಳಗಿದ್ದ ಪರ್ಸ್ ಕಳ್ಳತನವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ KSRTC ಬಸ್ ನಿಲ್ದಾಣಕ್ಕೆ ಕಂಟಕವಾಯ್ತು 3ನೇ ಗೇಟ್, ಎಚ್ಚೆತ್ತುಕೊಳ್ಳದಿದ್ದರೆ ಅಪಘಾತ ಫಿಕ್ಸ್
ರತ್ನಾ ಆರ್.ಭಟ್ ಅವರ ಪರ್ಸ್ನಲ್ಲಿ 74 ಗ್ರಾಂ ತೂಕ 2.59 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ ಇದ್ದವು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






