SHIVAMOGGA LIVE NEWS | 13 NOVEMBER 2023
SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು.
ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ ನೀಡಲಾಯಿತು. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಉದ್ಘಾಟಿಸಿದರು.
80ಕ್ಕೂ ಹೆಚ್ಚು ಮನೆಗಳಗೆ ತಂಡ
ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನದಿಂದ ಎರಡು ತಂಡಗಳು ಭಾನುವಾರ ಸಂಜೆಯಿಂದ ಅಂಟಿಕೆ ಪಂಟಿಗೆಯ ಜ್ಯೋತಿ ಹೊತ್ತು ಸಾಗಿದವು. ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಸಂಭ್ರಮದಿಂದ ಜ್ಯೋತಿಯನ್ನು ಬರಮಾಡಿಕೊಂಡರು. 80ಕ್ಕು ಹೆಚ್ಚು ಮೆನೆಗಳಿಗೆ ಅಂಟಿಕೆ ಪಂಟಿಗೆ ತಂಡ ಬೆಳಗಿನ ಜಾವದವರೆಗೂ ತೆರಳಿತು.
ಇದನ್ನೂ ಓದಿ- ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಸರ್ಕಲ್‌ನಲ್ಲಿ ಬೃಹತ್ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?
ಗಮನ ಸೆಳೆದ ಅಂಟಿಗೆ ಪಂಟಿಗೆ ಪದ
ಮನೆಗಳಿಗೆ ತೆರಳಿ ದೀಪ ನೀಡಿ ಅಂಟಿಗೆ ಪಂಟಿಗೆ ಪದಗಳ ಗಮನ ಸೆಳೆಯಿತು. ‘ದೀಪೋಳಿ ಎನ್ನಿರಣ್ಣಾ ..ಈ ಊರ ದೇವ್ರಿಗೆ’ , ‘ಮಣ್ಣಲ್ಲಿ ಹುಟ್ಟಿದೆ, ಮಣ್ಣಲ್ಲಿ ಬೆಳೆದೆ, ಎಣ್ಣೆಲಿ ಕಣ್ನಬಿಟ್ಟಿದೆ, ಜಗಜ್ಯೋತಿ ನಾ ಸತ್ಯದಿಂದ ಉರಿವೆ ಜಗಜ್ಯೋತಿ’ ಎನ್ನುತ್ತಾ ಶುಭಹಾರೈಸಿದರು. ಅಂಟಿಕೆ ಪಂಟಿಗೆಯ ತಂಡ ತರುವ ಜ್ಯೋತಿ ಮನೆ ಪ್ರವೇಶಿಸಿದಾಗ ಮನೆಯವರು ದೀಪಕ್ಕೆ ಎಣ್ಣೆ ಎರೆದು ಪೂಜೆ ಸಲ್ಲಿಸಿದರು. ಹೀಗೆ ದೀಪ ಬೆಳಗಿದ ಮನೆಯಲ್ಲಿ ಮುಂದಿನ ವರ್ಷದವರೆಗೆ ಯಾವುದೇ ಕಷ್ಟಗಳು ಬರುವುದಿಲ್ಲ ಎಂಬ ನಂಬಿಕೆಯಿದೆ.
ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ತಂಡದೊಂದಿಗೆ ಹೆಜ್ಜೆ ಹಾಕಿದರು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ, ಪದಾಧಿಕಾರಿಗಳಾದ ಎಂ.ಎಂ.ಸ್ವಾಮಿ, ಭೈರಾಪುರ ಶಿವಪ್ಪಮೇಷ್ಟು, ದೇವರಾಜ್, ಬಿ.ಟಿ.ಅಂಬಿಕಾ, ಮಹಾದೇವಿ, ಪಿ.ಕೆ.ಸತೀಶ್, ಶ್ರೀನಿವಾಸ ನಗಲಾಪುರ, ಸುಶೀಲ ಷಣ್ಮುಗಂ, ಸಿ.ಎಂ.ನೃಪತುಂಗ, ಲಲಿತಮ್ಮ, ಲೀಲಾವತಿ, ವಾಸಪ್ಪಗೌಡ, ಯೋಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200