
ಶಿವಮೊಗ್ಗ ಲೈವ್.ಕಾಂ | SHIMOGA | 5 ಮೇ 2020
ಶಿವಮೊಗ್ಗದ ಎಪಿಎಂಸಿಯಲ್ಲಿ ದಾವಣಗೆರೆ ಜಿಲ್ಲೆಯ ರೈತರು ಬೆಳೆದ ತರಕಾರಿಗೆ ನಿರ್ಬಂಧ ವಿಧಿಸಲಾಗಿದೆ. ಇವತ್ತು ದಾವಣಗೆರೆಯಿಂದ ಬಂದಿದ್ದ ತರಕಾರಿ ಗಾಡಿಗಳನ್ನು ಎಪಿಎಂಸಿ ಆವರಣದೊಳಗೆ ಬಿಡದೆ ಹಿಂದಕ್ಕೆ ಕಳುಹಿಸಲಾಗಿದೆ.
ದಾವಣಗೆರೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಪಿಎಂಸಿ ವತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗದ ಎಪಿಎಂಸಿಗೆ ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ತರಕಾರಿ ಬರುತ್ತದೆ. ಇದರ ಕುರಿತು ವಿಡಿಯೋ ರಿಪೋರ್ಟ್ ಇಲ್ಲಿದೆ.
ದಾವಣಗೆರೆಯಿಂದ ಬರುವವರಲ್ಲಿ ಸೋಂಕು ಕಾಣಿಸಿಕೊಂಡರೆ, ಶಿವಮೊಗ್ಗದಲ್ಲೂ ಅದು ಹರಡಬಹುದು ಎಂಬ ಆತಂಕದಿಂದಾಗಿ ಈ ಕ್ರಮ ಕೈಗೊಳ್ಳಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com





