ಶಿವಮೊಗ್ಗ ಲೈವ್
ಶಿವಮೊಗ್ಗ: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ಸಚಿವ ಮಧು ಬಂಗಾರಪ್ಪ ಅವರ ಕುರಿತು ಉದ್ವೇಗದಲ್ಲಿ ತಪ್ಪಾಗಿ ಮಾತನಾಡಿದ್ದು, ಇಬ್ಬರಲ್ಲೂ ಕ್ಷಮೆ ಕೋರುವುದಾಗಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹಾಲಿನ ದರ ಏರಿಕೆ ವಿಚಾರವಾಗಿ ನವೆಂಬರ್ 3 ರಂದು ನಗರದ ಪತ್ರಿಕಾ ಭವನದಲ್ಲಿ ಮಾತನಾಡುವ ಸಂದರ್ಭದಲ್ಲಿ ಉದ್ವೇಗಕ್ಕೆ ಒಳಗಾಗಿ ಹೇಳಿಕೆ ನೀಡಲಾಗಿತ್ತು ಎಂದು ಕ್ಷಮಾಯಾಚನೆ ಪತ್ರದಲ್ಲಿ ತಿಳಿಸಲಾಗಿದೆ. ಕಾಗೋಡು ತಿಮ್ಮಪ್ಪ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂದಿರುಗಿಸಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತು ನವೆಂಬರ್ 13 ರಂದು ಕಲ್ಲೂರು ಮೇಘರಾಜ್ ಕ್ಷಮಾಯಾಚನೆ ಪತ್ರ ಬಿಡುಗಡೆ ಮಾಡಿದ್ದಾರೆ.
