SHIVAMOGGA LIVE NEWS | EDUCATION | 21 ಮೇ 2022
ಶಿವಮೊಗ್ಗದ ಮಹಿಳಾ ಸರ್ಕಾರಿ ವಸತಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೊದಲನೇ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಪ್ರಾರಂಭವಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಉತ್ತೀರ್ಣರಾದವರು ನೇರವಾಗಿ ಪ್ರವೇಶ ಪಡೆಯಬಹುದಾಗಿದೆ ಎಂದು ಕಾಲೇಜು ಪ್ರಾಂಶುಪಾಲರಾದ ರವಿ ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವೆಲ್ಲ ಕೋರ್ಸುಗಳಿವೆ?
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ಕನ್ನಡ / ಇಂಗ್ಲೀಷ್, ಅಪ್ಯಾರಲ್ ಡಿಸೈನಿಂಗ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳಿವೆ. ಈ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಅದ್ಯತೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ಪ್ರತಿಷ್ಠಿತ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶಿವಮೊಗ್ಗದ ಪಾಲಿಟೆಕ್ನಿಕ್ ಕಾಲೇಜು ಒಂದಾಗಿದೆ. ಸುಸಜ್ಜಿತ ಕಟ್ಟಡ, ಅಚ್ಚುಕಟ್ಟು ಪ್ರಯೋಗಾಲಯ, ಅನುಭವಿ ಉಪನ್ಯಾಸಕ ವೃಂದವನ್ನು ಹೊಂದಿದೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗೆ ವಿಶೇಷ ಪ್ರೋತ್ಸಹವಿರಲಿದೆ.
ಪ್ರವೇಶ ಶುಲ್ಕ 1420 ರೂ. ಇರಲಿದೆ. ಆಸಕ್ತ ವಿದ್ಯಾರ್ಥಿಗಳು 9886610245, 9686396494, 9972721083, 9591309402 ಮೊಬೈಲ್ ನಂಬರ್ ಸಂಪರ್ಕಿಸಬಹುದು.
ಇದನ್ನೂ ಓದಿ – ನಿನ್ನೆ ಶಿವಮೊಗ್ಗ ತಾಲೂಕಿನಲ್ಲೆ ಅತಿ ಹೆಚ್ಚು ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.