ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯು 2026–27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಹಾಗೂ ಪರಿಶಿಷ್ಟ ಪಂಗಡದ (ಎಸ್ಟಿ) ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಮತ್ತು ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಎಸ್ಸಿ ಹಾಗೂ ಎಸ್ಟಿ ವರ್ಗದ ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮದಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಹಾಗೂ twd.karnataka.gov.in ಅಥವಾ ಎಸ್.ಎಸ್.ಪಿ ಪೋರ್ಟಲ್ ಹಾಗೂ ಎಚ್.ಎಂ.ಐ.ಎಸ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಎಚ್. ರಸ್ತೆ, ಶಿವಮೊಗ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 08182-240512 / 9480843194 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.