ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ (Akka Pade) ರಚಿಸಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 38 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಈ ತಂಡಕ್ಕೆ ಎನ್ಸಿಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿರಬೇಕು. ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ 2 ಪಾಳಿ ಆಧಾರದಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಗೆ ನ.13ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ, ದೂರವಾಣಿ ಸಂಖ್ಯೆ 08182-295514 ಸಂಪರ್ಕಿಸಬಹುದು.
ಇದನ್ನೂ ಓದಿ » ಬ್ಯಾಂಕಿನ ಮಹಿಳಾ ಸಿಬ್ಬಂದಿಯನ್ನು ಹೊಟೇಲ್ಗೆ ಕರೆಯಿಸಿ ಮೈ, ಕೈ ಮುಟ್ಟಿದ ಹಿರಿಯ ಅಧಿಕಾರಿ
