ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣ https://cbseitms.nic.in/2023/nvsix ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ. ಪ್ರವೇಶಕ್ಕೆ ಜಾಲತಾಣ https://cbseitems.nic.in/2023/nvsix_11 ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 30 ಕೊನೆ ದಿನ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.