SHIMOGA NEWS, 8 OCTOBER 2024 : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ (Application) ಆಹ್ವಾನಿಸಿದೆ. ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಅ.30 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.
ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ