ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 AUGUST 2023
ಪ್ಲಾಸ್ಟಿಕ್ ಧ್ವಜ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಖಡಕ್ ಸೂಚನೆ
SHIMOGA : ಕೇಂದ್ರ ಗೃಹ ಸಚಿವಾಲಯ ಪ್ಲಾಸ್ಟಿಕ್‍ನಿಂದ (Plastic) ತಯಾರಿಸಿದ ರಾಷ್ಟ್ರೀಯ ಧ್ವಜ (National Flag) ಬಳಸದಂತೆ ಸೂಚಿಸಿದೆ. ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಶಿಲ್ಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾರು ಮಾರಾಟದ ಹೆಸರಿನಲ್ಲಿ ವಂಚನೆ, ದೂರು ದಾಖಲು
SHIMOGA : ಕಾರು ಮಾರಾಟ ಮಾಡುವುದಾಗಿ ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಲಕ್ಷ ಲಕ್ಷ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಪರಮೇಶ್ ಎಂಬುವವರಿಗೆ ಕೊಪ್ಪಳದ ಗುರುಪಾದಯ್ಯ ಎಂಬುವವರು ಹ್ಯೂಂಡಯ್ ವರ್ಣ ಕಾರನ್ನು 3.50 ಲಕ್ಷ ರೂ.ಗೆ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ. ಮೊದಲಿಗೆ ಪರಮೇಶ್ 3 ಲಕ್ಷ ರೂ. ಹಣ ನೀಡಿದ್ದಾರೆ. ಕಾರಿನ ದಾಖಲಾತಿ ತನ್ನ ಹೆಸರಿಗೆ ಬದಲಾದ ಮೇಲೆ ಉಳಿದ 50 ಸಾವಿರ ರೂ. ಹಣ ನೀಡುವುದಾಗಿ ತಿಳಿಸಿದ್ದರು. ಒಂದುವರೆ ವರ್ಷ ಕಳೆದರು ಗುರುಪಾದಯ್ಯ ಕಾರಿನ ದಾಖಲೆಗಳನ್ನು ಪರಮೇಶ್ ಹೆಸರಿಗೆ ವರ್ಗಾಯಿಸದೆ ವಂಚಿಸಿದ್ದಾನೆ ಎಂದು ಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಜವಾಹರ ನವೋದಯ ವಿದ್ಯಾಲಯಕ್ಕೆ ಅರ್ಜಿ ಅಹ್ವಾನ
SHIMOGA : ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2023-24 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆಹ್ವಾನಿಸಲಾಗಿದೆ. ಅರ್ಜಿ ಅವಧಿಯನ್ನು ಆ.17ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆ.17ರವರೆಗೆ https://navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಇದನ್ನೂ ಓದಿ-ವಿಐಎಸ್‌ಎಲ್ ಪುನಾರಂಭಕ್ಕೆ ಆರಂಭಿಕ ತೊಂದರೆ, ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ನಿರಾಸೆ, ಆಗಿದ್ದೇನು?