ಹಿಂದುಳಿದ, ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ‌, ಅವಧಿ ವಿಸ್ತರಣೆ

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ  ವಿಸ್ತರಿಸಲಾಗಿದೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸಲ್ಲಿಸಬೇಕು. https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿ ಪಡೆಯಬಹುದು.

ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್‌ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್‌

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಹಾಗೂ bcwdhelpline@gmail.com ಗೆ ಸಂಪರ್ಕಿಸಬಹುದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶಕ್ಕಾಗಿ ಸಹಾಯವಾಣಿ ಸಂಖ್ಯೆ: 1902 ಹಾಗೂ postmatrichelp@karnataka.gov.in ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

SHIMOGA-NEWS-UPDATE

Leave a Comment