ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2027ನೇ ಸಾಲಿನ ‘ಪದ್ಮ ಪ್ರಶಸ್ತಿ’ಗಾಗಿ ಅರ್ಹ ಸಾಧಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಸಮಾಜದಲ್ಲಿ ಗಮನಾರ್ಹ ಪರಿಣಾಮ ಬೀರಿದರೂ, ಗುರುತಿಸಲ್ಪಡದೆ ಉಳಿದಿರುವ ತಳಮಟ್ಟದ ಸಾಧಕರನ್ನು ಗೌರವಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿದ ಮಹಿಳಾ ಸಾಧಕಿಯರು, ಸಮಾಜ ಸೇವಕರು, ಗ್ರಾಮೀಣ ಹಾಗೂ ಬುಡಕಟ್ಟು ಪ್ರದೇಶಗಳ ತಳಮಟ್ಟದ ಕಾರ್ಯಕರ್ತರು ಅರ್ಜಿ ಸಲ್ಲಿಸಬಹುದು. ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ, ಪೋಷಣೆ, ದೌರ್ಜನ್ಯ ತಡೆ, ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಸಾಧಕರಿಗೂ ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಹಾಗೂ ಸಂಸ್ಥೆಗಳು ತಮ್ಮ ಸಾಧನೆಗಳ ವಿವರಗಳನ್ನು ರಾಷ್ಟ್ರೀಯ ಪುರಸ್ಕಾರ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಆಲ್ಕೊಳ 100 ಅಡಿ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.